ಚಿಕ್ಕಬಳ್ಳಾಪುರ : ತಾನು ಬೆಳೆದ ಬೆಳೆಗೆ ಉತ್ತಮ ಬೆಲೆ ಸಿಗದ ಕಾರಣ, ಸ್ವಂತ ಜಮೀನಿನಲ್ಲಿ ಯುವ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರದ ತೊಂಡೆಬಾವಿ ಗ್ರಾಮದಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರದ ತೊಂಡೆಬಾವಿ ಗ್ರಾಮದ ಯುವ ರೈತ ಪವನ್ ಕುಮಾರ್ (22) ಆತ್ಮಹತ್ಯೆಗೆ ಶರಣಾದವನು.
ತಾನು ಬೆಳೆದ ಬೆಳೆಗೆ ಉತ್ತಮ ಬೆಲೆ ದೊರೆಯದ ಕಾರಣ ಪವನ್ ಕುಮಾರ್ ಜಮೀನಿನಲ್ಲೇ ನೇಣಿಗೆ ಶರಣಾಗಿದ್ದಾನೆ ಎನ್ನಲಾಗಿದೆ.
ಯುವಕ ಮೂರು ವರ್ಷಗಳಿಂದ ವ್ಯವಸಾಯದಲ್ಲಿ ತಂದೆಗೆ ಸಹಾಯ ಮಾಡಿಕೊಂಡಿದ್ದ. ಬೆಳೆಗೆ ಉತ್ತಮ ಬೆಲೆ ಸಿಗದ ಹಿನ್ನಲೇ ಮನನೊಂದಿದ್ದ, ಬ್ಯಾಂಕ್ ಹಾಗೂ ಸಂಬಂಧಿಕರ ಬಳಿ ಸಾಲ ಮಾಡಿದ್ದ ಎನ್ನಲಾಗಿದೆ.
ಸಾಲ ಮಾಡಿ ಉಳುಮೆ ಮಾಡುತ್ತಿದ್ದ ಯುವ ರೈತ ಬೆಳಗೆ ಉತ್ತಮ ಬೆಲೆ ಸಿಗದೇ ಕಂಗಾಲಾಗಿದ್ದ. ಶ್ರಮಕ್ಕೆ ಫಲ ದೊರೆಯದೇ ಬೇಸತ್ತ ಪವನ್‌ಕುಮಾರ್ ತನ್ನ ಜಮೀನಿನಲ್ಲೇ ಮರಕ್ಕೆ ನೇಣುಬಿಗಿದುಕೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಸ್ಥಳಕ್ಕೆ ತಹಶೀಲ್ದಾರ್ ಮಹೇಶ್ ಎಸ್ ಪತ್ರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ..
ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…
ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…
ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…
ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…
ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…
ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…