ಬೆಳೆಗೆ ಉತ್ತಮ ಬೆಲೆ ಸಿಗದ ಹಿನ್ನೆಲೆ ಯುವ ರೈತ ಆತ್ಮಹತ್ಯೆ

ಚಿಕ್ಕಬಳ್ಳಾಪುರ : ತಾನು ಬೆಳೆದ ಬೆಳೆಗೆ ಉತ್ತಮ ಬೆಲೆ ಸಿಗದ ಕಾರಣ, ಸ್ವಂತ ಜಮೀನಿನಲ್ಲಿ ಯುವ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರದ ತೊಂಡೆಬಾವಿ ಗ್ರಾಮದಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರದ ತೊಂಡೆಬಾವಿ ಗ್ರಾಮದ ಯುವ ರೈತ ಪವನ್ ಕುಮಾ‌ರ್ (22) ಆತ್ಮಹತ್ಯೆಗೆ ಶರಣಾದವನು.

ತಾನು ಬೆಳೆದ ಬೆಳೆಗೆ ಉತ್ತಮ ಬೆಲೆ ದೊರೆಯದ ಕಾರಣ ಪವನ್ ಕುಮಾ‌ರ್ ಜಮೀನಿನಲ್ಲೇ ನೇಣಿಗೆ ಶರಣಾಗಿದ್ದಾನೆ ಎನ್ನಲಾಗಿದೆ.

ಯುವಕ ಮೂರು ವರ್ಷಗಳಿಂದ ವ್ಯವಸಾಯದಲ್ಲಿ ತಂದೆಗೆ ಸಹಾಯ ಮಾಡಿಕೊಂಡಿದ್ದ. ಬೆಳೆಗೆ ಉತ್ತಮ ಬೆಲೆ ಸಿಗದ ಹಿನ್ನಲೇ ಮನನೊಂದಿದ್ದ, ಬ್ಯಾಂಕ್ ಹಾಗೂ ಸಂಬಂಧಿಕರ ಬಳಿ ಸಾಲ ಮಾಡಿದ್ದ ಎನ್ನಲಾಗಿದೆ.

ಸಾಲ ಮಾಡಿ ಉಳುಮೆ ಮಾಡುತ್ತಿದ್ದ ಯುವ ರೈತ ಬೆಳಗೆ ಉತ್ತಮ ಬೆಲೆ ಸಿಗದೇ ಕಂಗಾಲಾಗಿದ್ದ. ಶ್ರಮಕ್ಕೆ ಫಲ ದೊರೆಯದೇ ಬೇಸತ್ತ ಪವನ್‌ಕುಮಾ‌ರ್ ತನ್ನ ಜಮೀನಿನಲ್ಲೇ ಮರಕ್ಕೆ ನೇಣುಬಿಗಿದುಕೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಸ್ಥಳಕ್ಕೆ ತಹಶೀಲ್ದಾರ್ ಮಹೇಶ್ ಎಸ್ ಪತ್ರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ..

Ramesh Babu

Journalist

Recent Posts

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

5 hours ago

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

8 hours ago

ಪೆನ್ ಡ್ರೈವ್…….

ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…

10 hours ago

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

21 hours ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

1 day ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

1 day ago