ದೊಡ್ಡಬಳ್ಳಾಪುರ ತಾಲ್ಲೂಕಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಇಂದು 2023-24 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲು ವಿಮಾ ಯೋಜನೆ ಅಡಿ ಬೆಳೆ ಕಟಾವು ಪ್ರಯೋಗಗಳನ್ನು ಕೈಗೊಳ್ಳುವ ಕುರಿತು ತರಬೇತಿಯನ್ನು ಹಮ್ಮಿಕೊಳ್ಳಲಾಗಿತ್ತು.
ಕಂದಾಯ ಇಲಾಖೆ, ತೋಟಗಾರಿಕೆ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆ ಹಾಗೂ ಕೃಷಿ ಇಲಾಖೆ ಸಿಬ್ಬಂದಿಗೆ ತರಬೇತಿ ನೀಡಲಾಯಿತು.
ಇದೇ ಕಾರ್ಯಾಗಾರದಲ್ಲಿ ಜನನ ಮತ್ತು ಮರಣದ ನೋಂದಣಿ ಕುರಿತು ತರಬೇತಿಯನ್ನೂ ಸಹ ನೀಡಲಾಯಿತು.
ಕಾರ್ಯಕ್ರಮದಲ್ಲಿ ಸಹಾಯಕ ನಿರ್ದೇಶಕರು(ಸಾಂಖ್ಯಿಕ ಇಲಾಖೆ), ಸಹಾಯಕ ಕೃಷಿ ನಿರ್ದೇಶಕರು, ಸಹಾಯಕ ಸಾಂಖ್ಯಿಕ ಅಧಿಕಾರಿಗಳು, ಸಾಂಖ್ಯಿಕ ನಿರೀಕ್ಷಕರು ಹಾಗೂ ಜಿಲ್ಲೆಯ ಮತ್ತು ತಾಲ್ಲೂಕಿನ ವಿಮಾ ಪ್ರತಿನಿಧಿಗಳು ಮತ್ತು ತಾಲ್ಲೂಕಿನ ಎಲ್ಲಾ ಮೂಲ ಕಾರ್ಯಕರ್ತರು ಉಪಸ್ಥಿತರಿದ್ದರು.
ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…
ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…
ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…
ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…
ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…