ಬೆಳೆ ವಿಮೆ ಮಾಡಿಸಲು ಆ.14 ಕೊನೆಯ ದಿನ: ರೈತರು ತಪ್ಪದೇ ಬೆಳೆ ವಿಮೆ ಮಾಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇಕಡ 33 ರಷ್ಟು ಮಳೆ ಕೊರತೆಯಾಗಿದ್ದು ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರು, ಮೇವು ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಿ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬರಪರಿಸ್ಥಿತಿ ಸಂಬಂಧ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಬಳಿಕ ಸುದ್ದಿಗೋಷ್ಟಿ ನಡೆಸಿದರು.

ಜಿಲ್ಲೆಯಲ್ಲಿ ಇದುವರೆಗೆ ದಾಖಲಾಗಿರುವ ಮಳೆಯ ಪ್ರಮಾಣ, ತಾಲ್ಲೂಕುವಾರು ಮಳೆ ಕೊರತೆಯ ಸ್ಥಿತಿ ಹಾಗೂ ಮುಂಗಾರು ಹಂಗಾಮಿನ ಪ್ರಗತಿ ಕುರಿತು ಅಧಿಕಾರಿಗಳು ಮಾಹಿತಿ ನೀಡಿದರು. ಕೃಷಿ ಇಲಾಖೆಯ ವತಿಯಿಂದ ಮುಂಗಾರು ಬಿತ್ತನೆ ಪ್ರಗತಿ, ಬೆಳೆಗಳ ಪ್ರಗತಿ, ಬೆಳೆಗಳ ಸ್ಥಿತಿ, ರೈತರಿಗೆ ಅಗತ್ಯವಿರುವ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಲಭ್ಯತೆ, ಬೆಳೆಹಾನಿ ಕುರಿತು ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಿಸಲಾಯಿತು.

ಈಗಾಗಲೇ ಹಲವು ಭಾಗಗಳಲ್ಲಿ ರೈತರು ರಾಗಿ ಬಿತ್ತನೆ ಮಾಡಿದ್ದು ಮಳೆ ಕೊರತೆಯಿಂದ ರಾಗಿ ಬೆಳೆದಿಲ್ಲ. ಅಧಿಕಾರಿಗಳು ರೈತರ ಮನವೊಲಿಸಿ ಬೆಳೆ ವಿಮೆಗೆ ನೋಂದಾಯಿಸಲು ಕ್ರಮ ಕೈಗೊಳ್ಳಬೇಕು ಎಂದರು. ಯಾವೊಬ್ಬ ರೈತ ಕೂಡ ಬೆಳೆ ವಿಮೆ ವಂಚಿತರಾಗಬಾರದು. ರೈತರು ತಪ್ಪದೇ ಬೆಳೆ ವಿಮೆ ಮಾಡಿಸಿ, ಮಳೆ ಅಭಾವ ಸೃಷ್ಟಿ ಆದಲ್ಲಿ ನಷ್ಟ ಪರಿಹಾರ ಸಿಗಲಿದೆ ಎಂದರು.

ಕುಡಿಯುವ ನೀರಿನ ಲಭ್ಯತೆ, ಪರ್ಯಾಯ ನೀರು ಪೂರೈಕೆ ವ್ಯವಸ್ಥೆಗಳು ಹಾಗೂ ನೀರಿನ ಮೂಲಗಳ ಸಂರಕ್ಷಣೆಯ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಪ್ರದೇಶಗಳಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಮಳೆಯ ಕೊರತೆಯಿಂದ ತಾಲ್ಲೂಕಿನಾದ್ಯಂತ ಬೆಳೆಗಳು ಒಣಗುತ್ತಿದ್ದು ಕೂಡಲೆ ಬೆಳೆ ವಿಮೆ ಮಾಡಿಸಿಕೊಳ್ಳಬೇಕು ರೈತರಿಗೆ ಮನವಿ ಮಾಡಿದರು. ರಾಜ್ಯದ ಎಲ್ಲಾ ಜಿಲ್ಲೆಗಳ ಮಳೆ ಹಾಗೂ ಬೆಳೆ ಹಾನಿ ವರದಿಗಳನ್ನು ಪರಿಶೀಲಿಸಿದ ಬಳಿಕ ಆಗಸ್ಟ್ ಕೊನೆಯ ವಾರದಲ್ಲಿ ಬರ ಪರಿಹಾರದ ಕುರಿತು ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸುತ್ತಾರೆ. ಸರ್ಕಾರವು ರೈತರ ಬೆಂಬಲಕ್ಕೆ ನಿಲ್ಲಲಿದ್ದು, ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ಮಾತನಾಡಿ, ವೈಜ್ಞಾನಿಕವಾಗಿ ಇಂಗು ಗುಂಡಿಗಳನ್ನು ತಯಾರು ಮಾಡಿ ಅಂತರ್ಜಲ ಮಟ್ಟವನ್ನು ಹೆಚ್ಚಾಗಿ ಮಾಡಲು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲೆಯಲ್ಲಿ ಬೆಳೆಯು ಮಳೆಯ ಮೇಲೆ ಅವಲಂಬಿತವಾಗಿದ್ದು 10% ಬಿತ್ತನೆ ಮಾತ್ರವಾಗಿದೆ. ಕೆರೆಯಲ್ಲಿ ನೀರು ತುಂಬಿಸಿ ನೀರು ಶೇಖರಣೆ ಮಾಡಬೇಕು. ಕೆರೆಯಲ್ಲಿ ಬುಡ ಸಮೇತ ಮರಗಳನ್ನು ತೆರವುಗೊಳಿಸಿ ಕೆರೆಯನ್ನು ಸ್ವಚ್ಛ ಗೊಳಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ರಾಜಣ್ಣ, ಜಿಲ್ಲಾಧಿಕಾರಿ ಡಾ ಕೆ.ಎನ್ ಅನುರಾಧ, ಸಿಇಒ ಡಾ. ವಾಸಂತಿ ಅಮರ್ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ಮಕ್ಕಳ ಸಂಕಷ್ಟದ ಬದುಕಿಗೆ ಮುಕ್ತಿ: ಪಾಲಕರಿದ್ದರೂ ಅನಾಥರಂತಿದ್ದ ಮೂವರು ಮಕ್ಕಳ ರಕ್ಷಣೆ

ದೇಗುಲದ ಪ್ರಸಾದದಿಂದ ಹೊಟ್ಟೆ ತುಂಬಿಸಿಕೊಳ್ಳುವುದು, ದೇವಸ್ಥಾನದ ಬೀದಿಯಲ್ಲಿ ಭಿಕ್ಷಾಟನೆ ಮಾಡುವುದು, ರಾತ್ರಿ ವೇಳೆ ಬಂಡೆಗಳ ಪೊಟರೆ ಹಾಗೂ ಪೊದೆಗಳ ನಡುವೆ…

10 hours ago

ಸಿನಿಮಾ…. ಸೋಲು, ಗೆಲುವಿನ ಸುತ್ತಾ…..

ಟಾಕ್ಸಿಕ್ ಎಂಬ ಸಿನಿಮಾ ಪ್ರೇಕ್ಷಕರನ್ನು ತಲುಪುವಲ್ಲಿ ವಿಫಲವಾದ ಕೆಲವೇ ದಿನಗಳ ನಂತರ ಪ್ರೇಮದ ಊರಲಿ ಎಂಬ ಸಿನಿಮಾ ಸ್ವಲ್ಪ ಮಟ್ಟಿಗೆ…

16 hours ago

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

1 day ago

ಸರ್ಕಾರಿ ಗೋಮಾಳ ಒತ್ತುವರಿ ಮಾಡಿದವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನು ಪ್ರಕಾರ ಕ್ರಮ: ನಕಲಿ ಭೂದಾಖಲೆ ಸೃಷ್ಟಿ ಹಾಗೂ ಅಕ್ರಮ ಖಾತೆ ಬದಲಾವಣೆ ಕಂಡುಬಂದರೆ ಕಠಿಣ ಕ್ರಮ- ಕಂದಾಯ ಸಚಿವ ಡಾ.ಜಿ ಪರಮೇಶ್ವರ್

ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…

1 day ago

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪಾರ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್‌-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…

1 day ago

ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಸಚಿವ ಜಿ. ಪರಮೇಶ್ವರ್ ದಿಢೀರ್ ಭೇಟಿ

ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…

1 day ago