ಕರ್ನಾಟಕದಲ್ಲಿ ನಾವುಗಳು ಸುಮಾರು 5-6 ವರ್ಷಗಳಿಂದ ಬೆಳೆ ಸಮಿಕ್ಷೇದಾರರಾಗಿ ಸೇವೆ ಸಲ್ಲಿಸುತ್ತಾ ಬಂದಿದ್ದೇವೆ. ನಾವುಗಳು ಸೇವೆ ಸಲ್ಲಿಸುತ್ತಿರುವಾಗ ಹೊಲದಲ್ಲಿ ಹಾವು, ಚೇಳು ಕಚ್ಚಿರುತ್ತವೆ ಹಾಗೂ ಕಾಡು ಹಂದಿಗಳು, ತೋಳಗಳು, ಹೆಜ್ಜೇನುಗಳು ಸೇರಿದಂತೆ ಇತರೆ ಪ್ರಾಣಿಗಳ ದಾಳಿಯಿಂದ ಗಾಯಗೊಂಡಿರುತ್ತೇವೆ. ಹಿಂದೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ, ಹಾಗೂ ಕೋಡ್ಲಾ ಎಂಬ ಗ್ರಾಮದಲ್ಲಿ ನಮ್ಮ ಅಧಿಕಾರಿಗಳಿಗೆ (ಪಿ.ಆರ್) ಬೆಳೆ ಸಮಿಕ್ಷೇದಾರರಿಗೆ ಹಾವು ಕಚ್ಚಿದ್ದು, ಸಬಂಧಪಟ್ಟ ಅಧಿಕಾರಿಗಳಿಗೆ ಈ ಮಾಹಿತಿ ಸಲ್ಲಿಸಿದ್ದರು. ಆದರೆ, ಇದಕ್ಕೆ ಇನ್ನೂ ಪರಿಹಾರ ನೀಡಿರುವುದಿಲ್ಲ ಎಂಬ ಆರೋಪ ಕೇಳಿ ಬಂದಿದೆ.
ಕರ್ನಾಟಕ ಬೆಳೆ ಸಮಿಕ್ಷೇದಾರರ ಸಂಘದ ರಾಜ್ಯಾಧ್ಯಕ್ಷ ಮದುಚಂದ್ರ ಎಂ. ಮಹಾದೇವಯ್ಯ, ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜು ಡಿಪರೇಟ್ ರವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿ ಕರ್ನಾಟಕ ರಾಜ್ಯದ (ಪಿ.ಆರ್) ಸಮಿಕ್ಷೇದಾರರಿಗೆ ಸೇವಾ ಭದ್ರತೆ ಹಾಗೂ ಜೀವ ವಿಮೆ ಒದಗಿಸುವ ಮತ್ತುಖಾಯಂಗೊಳಿಸಲುವಂತೆ ಒತ್ತಾಯಿಸಿದ್ದಾರೆ.
ನಾವುಗಳು ಜೀವದ ಆಸೆ ಬಿಟ್ಟು ಶ್ರದ್ಧೆಯಿಂದ ಸೇವೆ ಮಾಡಿತ್ತಿದ್ದೇವೆ. ಸಮಿಕ್ಷೇ ಮಾಡುವಾಗ ಕೆಲವು ರೈತರು ನೀವು ಯಾರೆಂದು ಪ್ರಶ್ನೆ ಮಾಡುತ್ತಾರೆ. ಕೆಲವೊಮ್ಮೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ. ಆದ ಕಾರಣ ನಮಗೆ ದಿನಗೂಲಿ ಆಧಾರದ ಮೇಲೆ ದಿನಪೂರ್ತಿ ಕೆಲಸ ನೀಡಬೇಕು ಹಾಗೂ ಜೀವ ವಿಮೆ ಒದಗಿಸಬೇಕು ಮತ್ತು ಎಲ್ಲಾ (ಪಿ.ಆರ್) ಬೆಳೆ ಸಮೀಕ್ಷದಾರಿಗೆ ರೇನ್ ಕೋಟ್ ನೀಡಬೇಕು ಹಾಗೂ ಗುರುತಿನ ಚೀಟಿ (ಬುಟ್) ಶೂ. ನೀಡಬೇಕು ಎಂದು ಪಿ.ರಾಜು ಡಿಪರೇಟ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕರ್ನಾಟಕ ಬೆಳೆ ಸಮಿಕ್ಷೇದಾರರ ಸಂಘ ಬೆಂಗಳೂರು ಒತ್ತಾಯಿಸಿದೆ.
ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…
ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…
ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…
ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…
ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…