ದೊಡ್ಡಬಳ್ಳಾಪುರ ತಾಲ್ಲೂಕು ಕಸಬಾ ಹೋಬಳಿ ಸಿದ್ದೇನಾಯಕನಹಳ್ಳಿ ವೃತ್ತದ ಗ್ರಾಮ ಆಡಳಿತ ಅಧಿಕಾರಿ ಆದ ಹೆಚ್. ಎಸ್ ರಾಜೇಂದ್ರ ಬಾಬು ಅವರು ಸರ್ಕಾರದ ಆದೇಶದಂತೆ 2024-25ನೇ ಸಾಲಿನ ಮುಗಾರು ಬೆಳೆ ಸಮೀಕ್ಷೆ ಮಾಡಲು ಇಂದು ಸಂಜೆ ಸುಮಾರು 4-00 ಗಂಟೆಯ ಸಮಯದಲ್ಲಿ ಖಾಸ್ ಬಾಗ್ ಗ್ರಾಮದ ಸರ್ವೇ ನಂ 79/1ಬಿ ರ ಭೂ ಮಾಲೀಕರಾದ ಜಿ ಕೃಷ್ಣಪ್ಪ ಬಿನ್ ಹೆಚ್ ಗೋವಿಂದಪ್ಪ ರವರ ಜಮೀನಿನ ಬೆಳೆ ಸಮೀಕ್ಷೆ ಮಾಡುತ್ತಿದ್ದ ವೇಳೆ ಭೂ ಮಾಲೀಕರ ಸಹೋದರನಾದ ವಸಂತ್ ಕುಮಾರ್ ಎಂಬುವರು ಏಕಾಏಕಿ ಬಂದು ಹೆಚ್. ಎಸ್ ರಾಜೇಂದ್ರ ಬಾಬು ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ತೆಂಗಿನ ಪಟ್ಟೆಯಿಂದ ತಲೆ, ಎದೆಬಾಗ ಹಾಗೂ ಕೈಕಾಲುಗಳಿಗೆ ಹೊಡೆದು ಗಾಯಪಡಿಸಲಾಗಿದೆ ಎಂದು ಆರೋಪಿಸಲಾಗಿದೆ.
ನನ್ನ ಜಮೀನು ಒಳಗೆ ಬಂದು ನನ್ನ ಅನುಮತಿ ಇಲ್ಲದೆ ಹೇಗೆ ಜಮೀನಿನ ಫೋಟೋ ತೆಗೆಯುತ್ತಿರುವೆ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಲಾಗಿದೆ ಎಂದು ಆರೋಪಿಸಲಾಗಿದೆ.
ಸಿದ್ದೇನಾಯಕನಹಳ್ಳಿ ವೃತ್ತದ ಗ್ರಾಮ ಆಡಳಿತ ಅಧಿಕಾರಿಯಾಗಿ ನನಗೆ ಸಂಪೂರ್ಣ ಅಧಿಕಾರವಿದ್ದು ಯಾವುದೇ ಪೂರ್ವಾನುಮತಿ ಇಲ್ಲದೆ ಜಮೀನಿಗೆ ಭೇಟಿ ನೀಡಿ ಪರಿಶೀಲಿಸುವ ಅಧಿಕಾರ ಇದ್ದು, ಯಾವುದೇ ಭೂ ಮಾಲೀಕನ ಅನುಮತಿ ಪಡೆದು ಜಮೀನಿಗೆ ಭೇಟಿ ನೀಡುವ ಅವಶ್ಯಕತೆ ಇರುವುದಿಲ್ಲ. ಈಗಿದ್ದರು ಸಹ ನನ್ನ ಮೇಲೆ ಏಕಾಏಕಿ ಮಾರಣಾಂತಿಕ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿರುತ್ತಾರೆ. ಆದ್ದರಿಂದ ಸರ್ಕಾರಿ ಕೆಲಸಕ್ಕೆ ಅಡಚಣೆ ಮಾಡಿ ನನ್ನ ಮೇಲೆ ಹಲ್ಲೆ ಮಾಡಿರುವ ವಸಂತ್ ಕುಮಾರ್ ರವರ ವಿರುದ್ದ ಕಾನೂನು ಕ್ರಮ ಜರುಗಿಸಬೇಕೆಂದು ಹೆಚ್. ಎಸ್ ರಾಜೇಂದ್ರ ಬಾಬುರವರು ಪೊಲೀಸರಿಗೆ ದೂರು ನೀಡಿದ್ದಾರೆ.
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…