ಬೆಳೆ ಹಾನಿ ಸ್ಥಳಗಳಿಗೆ ಜಿಲ್ಲಾಧಿಕಾರಿ ಆರ್.ಲತಾ ಭೇಟಿ, ಪರಿಶೀಲನೆ

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು ಇಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಕಸವನಹಳ್ಳಿಯ ರೈತರ ಜಮೀನುಗಳಿಗೆ ಭೇಟಿ ನೀಡಿ ಮಳೆ ಹಾಗೂ ಗಾಳಿಯಿಂದ ಉಂಟಾದ ಬೆಳೆ ಹಾನಿ ಕುರಿತು ಪರಿಶೀಲನೆ ನಡೆಸಿ ಮಾಹಿತಿ ಪಡೆದರು.

ಈ ವೇಳೆ ದೊಡ್ಡಬಳ್ಳಾಪುರ ತಾಲ್ಲೂಕು ತಹಶೀಲ್ದಾರ್ ಮೋಹನಕುಮಾರಿ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಗುಣವಂತ ಸೇರಿದಂತೆ ಕೃಷಿ ಹಾಗೂ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *