
ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ….
ಅತೀವೇಗದಲ್ಲಿದ್ದ ಸಿಮೆಂಟ್ ಲಾರಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಎದುರು ಬರುತ್ತಿದ್ದ ಕಂಟೇನರ್ ಗೆ ಡಿಕ್ಕಿ ಹೊಡೆದಿದೆ….ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ…

ಇಷ್ಟಲ್ಲದೇ ಅಪಘಾತವಾದ ಕೂಡಲೇ ಸಿಮೆಂಟ್ ಲಾರಿಯಿಂದ ಹೊರಬಂದ ಚಾಲಕ ಬೈಕ್ ಗೆ ಅಡ್ಡಹೋಗಿದ್ದಾನೆ. ಆಗ ಬೈಕ್ ಸಹ ಕೆಳಗೆ ಬಿದ್ದಿದೆ. ಬೈಕ್ ಸವಾರನಿಗೂ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ…
ಸಿಮೆಂಟ್ ಲಾರಿ ದೊಡ್ಡಬಳ್ಳಾಪುರದಿಂದ ನೆಲಮಂಗಲದ ಕಡೆ ಹೋಗುತ್ತಿತ್ತು. ಕಂಟೇನರ್ ನೆಲಮಂಗಲದಿಂದ ದೊಡ್ಡಬಳ್ಳಾಪುರದ ಕಡೆ ಬರುತ್ತಿತ್ತು ಎಂದು ತಿಳಿದು ಬಂದಿದೆ…

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಸಲಾಗಿದೆ….