ಬೆಳ್ಳಂಬೆಳಗ್ಗೆ ಬೈಕ್ ಹಾಗೂ KSRTC ಬಸ್ ನಡುವೆ ಮುಖಾಮುಖಿ ಡಿಕ್ಕಿ: ಬೈಕ್ ಸವಾರನಿಗೆ ಗಂಭೀರ ಗಾಯ

ಬೆಳ್ಳಂಬೆಳಗ್ಗೆ ದೊಡ್ಡಬಳ್ಳಾಪುರದ ಜಾಲಪ್ಪ ಕಾಲೇಜು ಬಳಿ ಬೈಕ್ ಹಾಗೂ KSRTC ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿವೆ. ಗಾಯಾಳು ಬೈಕ್ ಸವಾರನನ್ನು ಕೂಡಲೇ ಆಸ್ಪತ್ರೆಗೆ ರವಾನಿಸಲಾಗಿದೆ.‌..

ದ್ವಿಚಕ್ರ ವಾಹನ ಸವಾರ ಲೋಕೆಶ್ ಎಂಬಾತನಿಗೆ ಕಾಲು ಮುರಿತ, ತಲೆಗೆ ಗಂಭೀರ ಗಾಯಗಳಾಗಿವೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ದೊಡ್ಡಬಳ್ಳಾಪುರ ನಗರದಿಂದ ಆರೂಡಿ ಬಳಿಯಿರುವ ಅಮಲಗುಂಟೆಗೆ ಹೋಗುತ್ತಿದ್ದ ಬಸ್ ಹಾಗೂ ಕೊಡಿಗೇಹಳ್ಳಿ ಕಡೆಯಿಂದ ಬರುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ…

ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿ ಚಿಂತಾಜನಕ‌ ಸ್ಥಿತಿಯಲ್ಲಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಚಿಕಿತ್ಸೆಯ ನಂತರ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ.

ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ….

Ramesh Babu

Journalist

Recent Posts

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರಾಗಿ ನರಸಿಂಹ ಮೂರ್ತಿ ನೇಮಕ

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…

11 hours ago

ಪ್ರತಿಯೊಬ್ಬ ಭಾರತೀಯನ ತಲೆ ಮೇಲೆ ರೂ. 4.8 ಲಕ್ಷದಷ್ಟು ಸಾಲದ ಹೊರೆ ಇದೆ- ಸಿಎಂ‌ ಸಿದ್ದರಾಮಯ್ಯ

ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…

12 hours ago

ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದ ಪಾಪಿ ಪುತ್ರ

ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…

13 hours ago

ವಿ. ಶಾಂತಕುಮಾರ್ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…

17 hours ago

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…

18 hours ago

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್: ಏ.1ರಿಂದ ನೋಂದಣಿ: ಮೇ.9, 10ಕ್ಕೆ ಕ್ರಿಕೆಟ್ ಟೂರ್ನಮೆಂಟ್

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…

19 hours ago