ಬೈಕ್ ಹಾಗೂ ಸಿಮೆಂಟ್ ಬಲ್ಕರ್ ಲಾರಿ ನಡುವೆ ಅಪಘಾತ ಸಂಭವಿಸಿ ಓರ್ವ ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಮುಂಜಾನೆ ಸುಮಾರು 5 ಗಂಟೆ ಸಮಯದಲ್ಲಿ ತಾಲೂಕಿನ ಗೊಲ್ಲಹಳ್ಳಿ ಬಳಿ ನಡೆದಿದೆ.
ಬಾಗೇಪಲ್ಲಿ ತಾಲೂಕಿನ ನಲ್ಲಾರೆಡ್ಡಿ ಪಲ್ಲಿಯ ಬಾಬು (35) ಮೃತ ದುರ್ದೈವಿ.
ಇಂದು ಮುಂಜಾನೆ ಗೊಲ್ಲಹಳ್ಳಿ ಬಳಿ ಟೀ ಅಂಗಡಿಯಲ್ಲಿ ಕಾಫಿ-ಟೀ ಕುಡಿಯಲು ಬೈಕ್ ನಿಲ್ಲಿಸಿ ಕಾಫಿ ಕುಡಿಯುವ ವೇಳೆ ಗೌರಿಬಿದನೂರು ಕಡೆಯಿಂದ ಬಂದ ಸಿಮೆಂಟ್ ಬಲ್ಕರ್ ಲಾರಿ ಏಕಾಏಕಿ ಬೈಕ್ ಮೇಲೆ ಹರಿದಿದೆ. ಬೈಕ್ ಬಳಿಯೇ ಇದ್ದ ಬಾಬು ಎಂಬುವವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಅಪಘಾತವೆಸಗಿದ ಲಾರಿ ಚಾಲಕ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…
ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…
ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…