ಬೆಳ್ಳಂಬೆಳಗ್ಗೆ ಬೈಕ್ ಹಾಗೂ ಸಿಮೆಂಟ್ ಬಲ್ಕರ್ ಲಾರಿ ನಡುವೆ ಅಪಘಾತ: ಓರ್ವ ಸಾವು: ಇಬ್ಬರಿಗೆ ಗಂಭೀರ ಗಾಯ

ಬೈಕ್ ಹಾಗೂ ಸಿಮೆಂಟ್ ಬಲ್ಕರ್ ಲಾರಿ ನಡುವೆ ಅಪಘಾತ ಸಂಭವಿಸಿ ಓರ್ವ ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಮುಂಜಾನೆ ಸುಮಾರು 5 ಗಂಟೆ ಸಮಯದಲ್ಲಿ ತಾಲೂಕಿನ ಗೊಲ್ಲಹಳ್ಳಿ ಬಳಿ ನಡೆದಿದೆ.

ಬಾಗೇಪಲ್ಲಿ ತಾಲೂಕಿನ ನಲ್ಲಾರೆಡ್ಡಿ ಪಲ್ಲಿಯ ಬಾಬು (35) ಮೃತ ದುರ್ದೈವಿ.

ಇಂದು ಮುಂಜಾನೆ ಗೊಲ್ಲಹಳ್ಳಿ ಬಳಿ ಟೀ ಅಂಗಡಿಯಲ್ಲಿ ಕಾಫಿ-ಟೀ ಕುಡಿಯಲು ಬೈಕ್ ನಿಲ್ಲಿಸಿ ಕಾಫಿ ಕುಡಿಯುವ ವೇಳೆ ಗೌರಿಬಿದನೂರು ಕಡೆಯಿಂದ ಬಂದ ಸಿಮೆಂಟ್ ಬಲ್ಕರ್ ಲಾರಿ ಏಕಾಏಕಿ ಬೈಕ್ ಮೇಲೆ ಹರಿದಿದೆ‌. ಬೈಕ್ ಬಳಿಯೇ ಇದ್ದ ಬಾಬು ಎಂಬುವವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಅಪಘಾತವೆಸಗಿದ ಲಾರಿ ಚಾಲಕ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Ramesh Babu

Journalist

Recent Posts

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

4 hours ago

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

14 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

1 day ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

1 day ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

1 day ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

1 day ago