ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಬೈಕ್‌ಗಳ ಮುಖಾಮುಖಿ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: ತಾಲ್ಲೂಕಿನ ಮಾಕಳಿ ರೈಲ್ವೆ ನಿಲ್ದಾಣದ ಸಮೀಪ ಹಿಂದೂಪುರ–ಯಲಹಂಕ ಹೆದ್ದಾರಿಯಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಮೃತರನ್ನು ಗುಂಡಮಗೆರೆ ಸಮೀಪದ ಮಾಕಳಿ ಗ್ರಾಮದ ಗಂಗರಾಜು (34) ಎಂದು ಗುರುತಿಸಲಾಗಿದೆ. ಅವರು ಮಾಕಳಿ ಬೆಟ್ಟದಲ್ಲಿ ಟ್ರಕ್ಕಿಂಗ್ ಗೈಡ್ ಆಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಕೆಲಸದ ನಿಮಿತ್ತ ಬೆಳಗ್ಗೆ ಮನೆಯಿಂದ ಬರುವ ವೇಳೆ, ಗೌರಿಬಿದನೂರು ಕಡೆಯಿಂದ ಬರುತ್ತಿದ್ದ ಮತ್ತೊಂದು ಬೈಕ್‌ ಇವರ ಬೈಕ್ ಗೆ ಡಿಕ್ಕಿ ಹೊಡೆಯಲಾಗಿ ಎಂದು ಸ್ಥಳೀಯರು ತಿಳಿಸಿದ್ದಾರೆ.

ಡಿಕ್ಕಿಯ ರಭಸಕ್ಕೆ ಎರಡೂ ಬೈಕ್‌ಗಳು ಜಖಂಗೊಂಡಿದ್ದು, ಗಂಗರಾಜು ಅವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೊಂದು ಬೈಕ್‌ನ ಸವಾರ, ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಮೂಲದವರು ಎನ್ನಲಾಗಿದ್ದು, ಅವರ ಕಾಲಿಗೆ ಗಂಭೀರವಾಗಿ ಗಾಯವಾಗಿದ್ದು, ಕಾಲು ಮುರಿತವಾಗಿರುವ ಶಂಕೆ ವ್ಯಕ್ತವಾಗಿದೆ. ಗಾಯಾಳುವನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಕುರಿತು ಮಾಹಿತಿ ತಿಳಿದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ನಿಖರ ಕಾರಣ ಹಾಗೂ ಹೆಚ್ಚಿನ ವಿವರಗಳು ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ.

Ramesh Babu

Journalist

Recent Posts

ಸಚಿವ ಜಾರ್ಜ್ ಜತೆ ಶಾರದೆಯ ದರ್ಶನ ಪಡೆದ ರಾಜ್ಯಪಾಲರಾದ ಡಾ. ಸುಧಾ ಯಾದವ್

ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ‌ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…

1 hour ago

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

13 hours ago

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

19 hours ago

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

22 hours ago

ಪೆನ್ ಡ್ರೈವ್…….

ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…

1 day ago

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

1 day ago