ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹೊಸಕೋಟೆ ತಾಲೂಕಿನ ಗೊಟ್ಟಿಪುರ ಗೇಟ್ ಬಳಿ ನಡೆದಿದೆ.
ತಿರುಪತಿಯಿಂದ ಬರುತ್ತಿದ್ದ ಆಂಧ್ರ ಸಾರಿಗೆ ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ ನಡೆದಿದೆ. ಡಿಕ್ಕಿ ರಭಸಕ್ಕೆ ಸ್ಥಳದಲ್ಲೇ ನಾಲ್ವರು ದುರ್ಮರಣ ಹೊಂದಿದ್ದಾರೆ ಎಂದು ತಿಳಿದುಬಂದಿದೆ.
16 ಜನ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಇಬ್ಬರ ಸ್ಥೀತಿ ಗಂಭೀರವಾಗಿದೆ.
ಕೇಶವರೆಡ್ಡಿ (44), ತುಳಸಿ (21), ಪ್ರಣತಿ (4), ಒಂದು ವರ್ಷದ ಮಗು ಸಾವನ್ನಪ್ಪಿದ್ದಾರೆ.
ತಿರುಪತಿಯಿಂದ ಬೆಂಗಳೂರಿಗೆ ಬರ್ತಿದ್ದ AP 03 Z 0190 ಸಂಖ್ಯೆಯ ಆಂಧ್ರ ಸಾರಿಗೆ ಬಸ್ ಚಾಲಕ ನಿದ್ದೆ ಮಂಪರಿನಲ್ಲಿ ಓವರ್ ಟೇಕ್ ಮಾಡಲು ಹೋಗಿ ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆಯಲಾಗಿದೆ.
ಡಿಕ್ಕಿ ರಭಸಕ್ಕೆ ಆಂಧ್ರ ಸಾರಿಗೆ ಬಸ್ ಸಂಪೂರ್ಣ ನಜ್ಜುಗುಜ್ಜಾಗಿದೆ.
ಹೊಸಕೋಟೆಯ ಸಿಲಿಕಾನ್ ಸಿಟಿ ಆಸ್ವತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಹೊಸಕೋಟೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮೈಸೂರಿನ ಕೆಆರ್ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು…
ಬೆಂಗಳೂರು ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಕೇಂದ್ರದಲ್ಲಿ ನಡೆದ ಕರ್ನಾಟಕ ಸೂಫಿಗಳ ಸಾಹಿತ್ಯ ಸಂಸ್ಕೃತಿ ಅನುಸಂಧಾನ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ…
ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸ್ ನೋಟಿಸ್ ನ್ನು ರಕ್ಷಕ್ ಬುಲೆಟ್ ಗೆ ನೀಡಲಾಗುತ್ತು.…
ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ರಕ್ಷಕ್ ಬುಲೆಟ್ ಇಂದು ವಿಚಾರಣೆಗೆ ಹಾಜರಾಗಿದ್ದರು. ಇನ್ಸ್ ಪೆಕ್ಟರ್ ಸಾಧಿಕ್…
ಜನಸಂಖ್ಯೆ ಆಧಾರದ ಮೇಲೆ ಒಳ ಮೀಸಲಾತಿ ನೀಡುವಂತೆ ರಾಜ್ಯ ಸರ್ಕಾರಗಳಿಗೆ ಆದೇಶ ನೀಡಿ ಇಂದಿಗೆ ಒಂದು ವರ್ಷ ಕಳೆದಿದೆ ಆದರೆ…
ಜಿಲ್ಲೆಯಲ್ಲಿ 10.165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ ಇದ್ದು, ಬೇಡಿಕೆಗಿಂತ ಹೆಚ್ಚಿನ ರಸಗೊಬ್ಬರ ದಾಸ್ತಾನು ಇದೆ ಹಾಗಾಗಿ ರಸಗೊಬ್ಬರ ಕೊರತೆ…