Categories: Accident

ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ: 7 ಮಂದಿ ಸ್ಥಳದಲ್ಲೇ ದುರ್ಮರಣ ಕೇಸ್: ಔಟಿಂಗ್ ಹೋದ ಟೀನೆಜರ್ಸ್ ಸೇರಿದ್ದು ಮಸಣ

ಇಂದು ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಸುಮಾರು 7 ಮಂದಿ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ ಸತ್ಯವರ ಗ್ರಾಮದ ಬಳಿ ನಡೆದಿದೆ..

ಹೊಸಕೋಟೆ–ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಂಟರ್ ವಾಹನ, ಬೈಕ್ ಹಾಗೂ ಎಕ್ಸ್ ​ಯುವಿ ಕಾರಿನ ನಡುವೆ ಸರಣಿ ಡಿಕ್ಕಿ ಸಂಭವಿಸಿದ್ದು, ಘಟನೆ ಸ್ಥಳದಲ್ಲೇ ಕಾರಿನಲ್ಲಿದ್ದ ಆರು ಮಂದಿ ಮತ್ತು ಬೈಕ್ ಸವಾರ ಸಾವನ್ನಪ್ಪಿದ್ದಾರೆ.

ಅಶ್ವಿನ್ ನಾಯರ್ 17 ವರ್ಷ ಆರ್ ವಿ ಪಿಯು ಕಾಲೇಜ್ , ಕೊತ್ತನೂರು ನಿವಾಸಿ, ಅರ್ಹನ್ ಶರೀಫ್,  ಸಿಎಂಆರ್ ಶಾಲೆ ವಿದ್ಯಾರ್ಥಿ, ಹೆಚ್ ವಿ ಆರ್ ಲೇಔಟ್ ನಿವಾಸಿ, ಅಯನ್ 17 ವರ್ಷ ಸಿ ಎಂ ಆರ್ ಸ್ಕೂಲ್, ಭರತ್ 18 ವರ್ಷ , ಸಿಎಂಆರ್ ಕಾಲೇಜ್, ಫ್ರೇಜನ್ ಟೌನ್ ನಿವಾಸಿ, ಲ ಈತನ್ ಜಾರ್ಜ್ 17 ವರ್ಷ ಆರ್ ವಿ 1st ಪಿಯು ಕಾಲೇಜ್( ಹುಳಿಮಾವು ನಿವಾಸಿ).

ಡ್ರೈವಿಂಗ್ ಲೈಸೆನ್ಸ್ ಇಲ್ಲದೆ ಇದ್ದವರ ಕಾರು ಸವಾರಿ ಮಾಡಲಾಗಿತ್ತು. ನಗರದ ವಿವಿಧ ಶಾಲಾ- ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಹುಡುಗರು. ಡ್ರೈವಿಂಗ್ ಲೈಸೆನ್ಸ್ ಇಲ್ಲದೆ ಕಾರು ಡ್ರೈವಿಂಗ್ ಮಾಡುತ್ತಿದ್ದರು.  XUV ಕಾರಿನಲ್ಲಿ ಔಟಿಂಗ್ ಹೋದ ಹುಡುಗರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ಎಸ್ಎಸ್ ಎಲ್ ಸಿ, ಮೊದಲ ಪಿಯುಸಿ ವಿದ್ಯಾರ್ಥಿಗಳು ಮೃತಪಟ್ಟವರು ಎಂದು ತಿಳಿದುಬಂದಿದೆ… ಆರು ಹುಡುಗರಲ್ಲಿ ಐವರ ಗುರುತು ಪತ್ತೆಯಾಗಿದೆ.

ಮೂರು ಶಾಲಾ- ಕಾಲೇಜಿನ ಸ್ನೇಹಿತರು ಒಂದೆಡೆ ಸೇರಿ ಹೊಸಕೋಟೆ ಬಿರಿಯಾನಿ ಸವಿಯಲು ಆಗಮಿಸಿದ್ದರು ಎನ್ನುವ ಸಂಶಯವ್ಯಕ್ತವಾಗಿದೆ. ಅತಿ ವೇಗದ ಚಾಲನೆ ಬ್ಯಾಲೆನ್ಸ್ ಮಾಡಲಾಗದೇ ಸರಣಿ ಅಪಘಾತವಾಗಿದೆ.

ಅತಿವೇಗವೇ ಅಪಘಾತಕ್ಕೆ ಕಾರಣವಾಗಿರಬಹುದೆಂದು ಪ್ರಾಥಮಿಕವಾಗಿ ಶಂಕಿಸಲಾಗಿದೆ.

ಹೆದ್ದಾರಿಯಲ್ಲಿ ಸಾಗುತ್ತಿದ್ದ ಎಕ್ಸ್ ​ಯುವಿ ಕಾರು ಮೊದಲು ಮುಂದೆ ಹೋಗುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದ್ದು, ಬಳಿಕ ನಿಯಂತ್ರಣ ತಪ್ಪಿ ಕ್ಯಾಂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.

ಸ್ಥಳಕ್ಕೆ ಐಜಿ ಲಾಭೂ ರಾಮ್, ಎಸ್ಪಿ ಚಂದ್ರಕಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ….

ಸೂಲಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ…

Ramesh Babu

Journalist

Recent Posts

‘ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ’…

ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…

5 hours ago

ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಇಬ್ಬರು ಸ್ನೇಹಿತರು ಸಾವು

ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…

7 hours ago

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ….!

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…

19 hours ago

ದೇವರ ಆಶೀರ್ವಾದದಿಂದಲೇ ಎರಡು ಬಾರಿ ಸಿಎಂ ಆಗಿದ್ದೇನೆ- ಸಿಎಂ ಸಿದ್ದರಾಮಯ್ಯ

ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…

20 hours ago

ತೂಬಗೆರೆಯಲ್ಲಿಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ: ಗ್ರಾಮೀಣ ಜನರ ಆರೋಗ್ಯ ಬಹಳ ಮುಖ್ಯ- ಡಾ. ಜ್ಞಾನೇಶ್ವರಿ

ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…

20 hours ago

ಜಾತ್ರೆಯಲ್ಲಿ ವ್ಯಕ್ತಿಯ ಭೀಕರ ಕೊಲೆ

ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…

1 day ago