ಇಂದು ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಸುಮಾರು 7 ಮಂದಿ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ ಸತ್ಯವರ ಗ್ರಾಮದ ಬಳಿ ನಡೆದಿದೆ..
ಹೊಸಕೋಟೆ–ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಂಟರ್ ವಾಹನ, ಬೈಕ್ ಹಾಗೂ ಎಕ್ಸ್ ಯುವಿ ಕಾರಿನ ನಡುವೆ ಸರಣಿ ಡಿಕ್ಕಿ ಸಂಭವಿಸಿದ್ದು, ಘಟನೆ ಸ್ಥಳದಲ್ಲೇ ಕಾರಿನಲ್ಲಿದ್ದ ಆರು ಮಂದಿ ಮತ್ತು ಬೈಕ್ ಸವಾರ ಸಾವನ್ನಪ್ಪಿದ್ದಾರೆ.
ಅತಿವೇಗವೇ ಅಪಘಾತಕ್ಕೆ ಕಾರಣವಾಗಿರಬಹುದೆಂದು ಪ್ರಾಥಮಿಕವಾಗಿ ಶಂಕಿಸಲಾಗಿದೆ.
ಹೆದ್ದಾರಿಯಲ್ಲಿ ಸಾಗುತ್ತಿದ್ದ ಎಕ್ಸ್ ಯುವಿ ಕಾರು ಮೊದಲು ಮುಂದೆ ಹೋಗುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದ್ದು, ಬಳಿಕ ನಿಯಂತ್ರಣ ತಪ್ಪಿ ಕ್ಯಾಂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಮೃತಪಟ್ಟವರಲ್ಲಿ ಆರು ಮಂದಿ ಬೆಂಗಳೂರಿನ ಕೊತ್ತನೂರು ಮೂಲದವರು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…
ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…
ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…
ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…
ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…