
ಬೆಳ್ಳಂಬೆಳಗ್ಗೆ ಭ್ರಷ್ಟರ ಬೇಟೆಗಿಳಿದಿರುವ ಲೋಕಾಯುಕ್ತ ತಂಡ ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ. ರಾಜ್ಯದಲ್ಲಿ 11 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ರೇಡ್ ನಡೆಸಿ ಶೋಧ ಕಾರ್ಯ ಕೈಗೊಂಡಿದ್ದಾರೆ.
ಬೆಂಗಳೂರು ಆರ್ ಟಿ ಒ ವ್ಯವಸ್ಥಾಪಕ ನಿರ್ದೇಶಕ ಕುಮಾರಸ್ವಾಮಿ, ಮಂಡ್ಯ ನಗರಪಾಲಿಕೆ ಮುಖ್ಯ ಆಡಳಿತಾಧಿಕಾರಿ ಸ್ವಾಮಿ, ಬೀದರ್ ನ ಇಂಜಿನಿಯರ್ ಪ್ರೇಮ್ ಸಿಂಗ್, ಕೃಷ್ಣ ಮೇಲ್ದಂಡೆ ಯೋಜನೆಯ ಇಂಜಿನಿಯರ್, ಮೈಸೂರು ರೆವೆನ್ಯೂ ಇನ್ಸ್ ಪೆಕ್ಟರ್ ರಾಮಸ್ವಾಮಿ, ಹೂಟಗಳ್ಳಿ ನಗರ ಪಾಲಿಕೆಯ ಇನ್ಸ್ ಪೆಕ್ಟರ್ ಸೇರಿದಂತೆ ಹಲವು ಅಧಿಕಾರಿಗಳ ಆಸ್ತಿ ಮೇಲೆ ನಿಗಾ ಇಟ್ಟಿರುವ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿ ತಲಾಷ್ ಮಾಡುತ್ತಿದ್ದಾರೆ.
ಶಿವಮೊಗ್ಗದ ಸಿಮ್ಸ್ ಮೆಡಿಕಲ್ ಕಾಲೇಜಿನ ಎಫ್ ಡಿ ಎ ಲಕ್ಷ್ಮೀಪತಿ ಸಿಎನ್, ದಾವಣಗೆರೆ ಎಪಿಎಂಸಿ ನಿರ್ದೇಶಕ ಪ್ರಭು.ಜೆ, ಮೈಸೂರಿನ ಸಹಾಯಕ ಇಂಜಿನಿಯರ್ ಗಿರೀಶ್ ಡಿಎಂ ಸೇರಿದಂತೆ 11 ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿರುವ ಲೋಕಾ ಅಧಿಕಾರಿಗಳು ಅಕ್ರಮ ಹಣ ಸಂಪಾದನೆ ಕುರಿತು ಮಾಹಿತಿ ಸಂಗ್ರಹಿಸುತ್ತಿದ್ದಾರೆ.