ದೊಡ್ಡಬಳ್ಳಾಪುರ ತಾಲೂಕಿನ ಮಾಕಳಿ ರೈಲ್ವೆ ನಿಲ್ದಾಣ ಮೂಲಕ ಹಾದುಹೋಗಿರುವ ಹಿಂದೂಪುರ- ಯಲಹಂಕ ಹೆದ್ದಾರಿಯಲ್ಲಿ ಸುಮಾರು ಎರಡು ದಿನಗಳಿಂದ ಕೆಟ್ಟು ನಿಂತಿದ್ದ ಕಂಬಿ ಹೊತ್ತ ಲಾರಿಗೆ ಖಾಸಗಿ ಕಂಪನಿ ಕಾರ್ಮಿಕರನ್ನು ಹೊತ್ತು ಸಾಗುತ್ತಿದ್ದ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದಿರುವ ಘಟನೆ ಇಂದು ಮುಂಜಾನೆ ಸುಮಾರು 5 ಗಂಟೆಯಲ್ಲಿ ನಡೆದಿದೆ.
ಮನೆ ಕಟ್ಟಡ ನಿರ್ಮಾಣಕ್ಕೆ ಬಳಸುವ ಕಬ್ಬಿಣದ ಕಂಬಿ ಹೊತ್ತಿರುವ ಲಾರಿ ಹಿಂದೂಪುರದಿಂದ ಬೆಂಗಳೂರು ಕಡೆ ಬರುವ ವೇಳೆ ಮಾಕಳಿ ರೈಲ್ವೆ ನಿಲ್ದಾಣದ ಸಮೀಪ ಎರಡು ದಿನಗಳಿಂದ ಕೆಟ್ಟು ನಿಂತಿರುತ್ತದೆ. ಮಿನಿ ಬಸ್ಸೊಂದು ಇಂದು ಬೆಳಗಿನ ಜಾವ ಸುಮಾರು 5 ಗಂಟೆಯಲ್ಲಿ ಗೌರಿಬಿದನೂರಿನಿಂದ ದೊಡ್ಡಬಳ್ಳಾಪುರ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುವ ಕಾರ್ಮಿಕರನ್ನು ಕರೆತರುವ ವೇಳೆ ಹಿಬಂದಿಯಿಂದ ಕಂಬಿ ಲಾರಿಗೆ ಬಸ್ ಡಿಕ್ಕಿ ಹೊಡೆದಿದೆ…
ಬಸ್ಸಿನಲ್ಲಿದ್ದ ಡ್ರೈವರ್, ಹಲವು ಕಾರ್ಮಿಕರಿಗೆ ಸಣ್ಣಪುಟ್ಟ ಗಾಯಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ… ಸದ್ಯ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಡಿಕ್ಕಿ ರಭಸಕ್ಕೆ ಬಸ್ಸಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಸಲಾಗಿದೆ….
ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…
ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…
ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…
ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…
ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…
ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…