ಬೆಳ್ಳಂಬೆಳಗ್ಗೆ ಮಾಕಳಿ ರೈಲ್ವೆ ನಿಲ್ದಾಣದ ಹೆದ್ದಾರಿಯಲ್ಲಿ ಅಪಘಾತ: ಹಲವರಿಗೆ ಗಾಯ: ಆಸ್ಪತ್ರೆಗೆ ದಾಖಲು

ದೊಡ್ಡಬಳ್ಳಾಪುರ ತಾಲೂಕಿನ ಮಾಕಳಿ ರೈಲ್ವೆ ನಿಲ್ದಾಣ ಮೂಲಕ‌ ಹಾದುಹೋಗಿರುವ ಹಿಂದೂಪುರ- ಯಲಹಂಕ ಹೆದ್ದಾರಿಯಲ್ಲಿ ಸುಮಾರು ಎರಡು ದಿನಗಳಿಂದ ಕೆಟ್ಟು ನಿಂತಿದ್ದ ಕಂಬಿ ಹೊತ್ತ ಲಾರಿಗೆ ಖಾಸಗಿ ಕಂಪನಿ ಕಾರ್ಮಿಕರನ್ನು ಹೊತ್ತು ಸಾಗುತ್ತಿದ್ದ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದಿರುವ ಘಟನೆ ಇಂದು ಮುಂಜಾನೆ ಸುಮಾರು 5 ಗಂಟೆಯಲ್ಲಿ ನಡೆದಿದೆ.

ಮನೆ‌ ಕಟ್ಟಡ ನಿರ್ಮಾಣಕ್ಕೆ ಬಳಸುವ ಕಬ್ಬಿಣದ ಕಂಬಿ ಹೊತ್ತಿರುವ ಲಾರಿ ಹಿಂದೂಪುರದಿಂದ ಬೆಂಗಳೂರು ಕಡೆ ಬರುವ ವೇಳೆ ಮಾಕಳಿ ರೈಲ್ವೆ ನಿಲ್ದಾಣದ ಸಮೀಪ ಎರಡು ದಿನಗಳಿಂದ ಕೆಟ್ಟು ನಿಂತಿರುತ್ತದೆ.‌ ಮಿನಿ ಬಸ್ಸೊಂದು ಇಂದು ಬೆಳಗಿನ ಜಾವ ಸುಮಾರು 5 ಗಂಟೆಯಲ್ಲಿ ಗೌರಿಬಿದನೂರಿನಿಂದ ದೊಡ್ಡಬಳ್ಳಾಪುರ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುವ ಕಾರ್ಮಿಕರನ್ನು ಕರೆತರುವ ವೇಳೆ ಹಿಬಂದಿಯಿಂದ ಕಂಬಿ ಲಾರಿಗೆ ಬಸ್ ಡಿಕ್ಕಿ ಹೊಡೆದಿದೆ…

ಬಸ್ಸಿನಲ್ಲಿದ್ದ ಡ್ರೈವರ್, ಹಲವು ಕಾರ್ಮಿಕರಿಗೆ ಸಣ್ಣಪುಟ್ಟ ಗಾಯಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ… ಸದ್ಯ‌ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಡಿಕ್ಕಿ ರಭಸಕ್ಕೆ ಬಸ್ಸಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಸಲಾಗಿದೆ….

Ramesh Babu

Journalist

Recent Posts

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

2 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

7 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

10 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

12 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

1 day ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

1 day ago