ದೊಡ್ಡಬಳ್ಳಾಪುರ ನಗರದ ರೈಲ್ವೆ ಸ್ಟೇಷನ್ ವೃತ್ತದ ಬಳಿ ನಿಂತಿದ್ದ ವ್ಯಕ್ತಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಹಿಟ್ ಅಂಡ್ ರನ್ ಗೆ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಇಂದು ಮುಂಜಾನೆ 5 ಗಂಟೆ ಸಮಯದಲ್ಲಿ ಘಟನೆ ನಡೆದಿದ್ದು, ಮೃತ ವ್ಯಕ್ತಿಯನ್ನು ಬಾಲಾಜಿ (ಬಾಲು 40) ಗುರುತಿಸಲಾಗಿದೆ.
ಮೃತ ವ್ಯಕ್ತಿ ಆಂಧ್ರಪ್ರದೇಶದ ಚೋಳಸಮುದ್ರ ಮೂಲದವನು ಎಂದು ತಿಳಿದುಬಂದಿದೆ. ತೋಟವೊದಂರಲ್ಲಿ ಕೂಲಿ ಕಾರ್ಮಿಕನಾಗಿದ್ದು, ಕೆಲಸಕ್ಕೆಂದು ಬಂದಿದ್ದ ವೇಳೆ ಬೆಂಗಳೂರಿನಿಂದ ಡಿಕ್ರಾಸ್ ಕಡೆ ಬರುವ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದು, ವ್ಯಕ್ತಿ ಸ್ಥಳದಲ್ಲೇ ತೀವ್ರ ರಕ್ತಸ್ರಾವದಿಂದ ಮೃತಪಟ್ಟಿರುವ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ಸ್ಥಳಕ್ಕೆ ದೊಡ್ಡಬಳ್ಳಾಪುರ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅಪರಿಚಿತ ವಾಹನ ಡಿಕ್ಕಿ ಹೊಡೆದು ಹೋಗಿದ್ದು, ಕೃತ್ಯ ಎಸಗಿದ ವಾಹನ ಹಾಗೂ ಚಾಲಕನ ಪತ್ತೆಗಾಗಿ ಸದ್ಯ ಪೊಲೀಸರು ಸ್ಥಳದಲ್ಲಿನ ಸಿಸಿ ಕ್ಯಾಮಾರಗಳ ಪರಿಶೀಲನೆ ಮಾಡುತ್ತಿದ್ದಾರೆ.