ಬೆಸ್ಕಾಂನಿಂದ ಇವಿ ಮೂಲಸೌಕರ್ಯಕ್ಕಾಗಿ ದೇಶದ ಮೊದಲ ಲ್ಯಾಂಡ್ ಅಗ್ರಿಗೇಟರ್ ಪೋರ್ಟಲ್‌ನ ಬಿಡುಗಡೆ

ಬೆಂಗಳೂರು: ರಾಜ್ಯದಲ್ಲಿ ಹಸಿರು ಚಲನಶೀಲತೆ ಉಪಕ್ರಮಗಳನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ, ಬೆಸ್ಕಾಂ ದೇಶದಲ್ಲೇ ಮೊದಲ ಬಾರಿಗೆ ಇವಿ ಚಾರ್ಜಿಂಗ್ ಹಾಗೂ ಬ್ಯಾಟರಿ ವಿನಿಮಯ ಕೇಂದ್ರಗಳ ಸ್ಥಾಪನೆ ಹಾಗೂ ತ್ವರಿತ ವಿದ್ಯುತ್‌ ಸಂಪರ್ಕಕ್ಕೆ ಏಕ ಗವಾಕ್ಷಿ ವ್ಯವಸ್ಥೆಯನ್ನು ಹೊಂದಿರುವ ಲ್ಯಾಂಡ್ ಅಗ್ರಿಗೇಟರ್ ಪೋರ್ಟಲ್ ಅನ್ನು ಬಿಡುಗಡೆಮಾಡಿದೆ. ಈ ಡಿಜಿಟಲ್ ವೇದಿಕೆ ರಾಜ್ಯಾದ್ಯಂತ ಇವಿ ಮೂಲಸೌಕರ್ಯದ ಅಭಿವೃದ್ಧಿಗೆ ವೇಗ ನೀಡುವ ಜೊತೆಗೆ ಸ್ವಚ್ಛ ಚಲನಶೀಲತೆಯನ್ನು ಉತ್ತೇಜಿಸುವ ಗುರಿ ಹೊಂದಿದೆ.

ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಇತ್ತೀಚೆಗೆ ಬೆಸ್ಕಾಂ ನಿಗಮ ಕಚೇರಿಯಲ್ಲಿ ಈ ವಿಶಿಷ್ಟ ಪೋರ್ಟಲ್‌ಗೆ ಚಾಲನೆ ನೀಡಿದರು. ಖಾಸಗಿ ಭೂಮಾಲೀಕರು, ಸರ್ಕಾರಿ ಇಲಾಖೆಗಳು, ಖಾಸಗಿ ಸಂಸ್ಥೆಗಳು ಹಾಗೂ ಚಾರ್ಜ್ ಸ್ಟೇಷನ್‌ ಆಪರೇಟರ್‌ಗಳು ರಾಜ್ಯಾದ್ಯಂತ ಇವಿ ಚಾರ್ಜಿಂಗ್ ಹಾಗೂ ಬ್ಯಾಟರಿ ವಿನಿಮಯ ಕೇಂದ್ರಗಳನ್ನು ಸ್ಥಾಪಿಸಲು ಹಾಗೂ ಬೆಸ್ಕಾಂನಿಂದ ವಿದ್ಯುತ್‌ ಸಂಪರ್ಕವನ್ನು ತ್ವರಿತವಾಗಿ ಪಡೆಯಲು ಏಕ ಗವಾಕ್ಷಿ ವ್ಯವಸ್ಥೆಯನ್ನು ಪೋರ್ಟಲ್‌ ನಲ್ಲಿ ಕಲ್ಪಿಸಲಾಗಿದೆ.

ನಗರ ಹಾಗೂ ಹೆದ್ದಾರಿ ಪ್ರದೇಶಗಳಲ್ಲಿ ಸಾರ್ವಜನಿಕ ಇವಿ ಮೂಲಸೌಕರ್ಯಗಳನ್ನು ಅತ್ಯಂತ ತ್ವರಿತಗತಿಯಲ್ಲಿ  ಸ್ಥಾಪಿಸಲು ಭೂಮಾಲೀಕರು ಮತ್ತು ಚಾರ್ಜಿಂಗ್ ಆಪರೇಟರ್‌ಗಳಿಗೆ ಲ್ಯಾಂಡ್ ಅಗ್ರಿಗೇಟರ್ ಪೋರ್ಟಲ್‌  ನೆರವಾಗಲಿದೆ. ಇವಿ ಹಬ್‌ಗಳ ನಿರ್ಮಾಣವನ್ನು ಉತ್ತೇಜಿಸುವ ಸಲುವಾಗಿ  ರಾಷ್ಟ್ರೀಯ ಹೆದ್ದಾರಿ, ಇವಿ ವಿಭಾಗ (NHEV) ಈ ಉಪಕ್ರಮದಲ್ಲಿ ಬೆಸ್ಕಾಂ ಜೊತೆ ಕೈಜೋಡಿಸಿದೆ. ಸ್ವಚ್ಛ ಚಲನಶೀಲತೆ, ಸಾರ್ವಜನಿಕ–ಖಾಸಗಿ ಸಹಭಾಗಿತ್ವ ಮತ್ತು ವಿಸ್ತರಣೆಗೆ ಅನುಕೂಲಕರವಾದ ಇವಿ ಮೂಲಸೌಕರ್ಯವನ್ನು ಉತ್ತೇಜಿಸುವ ಉದ್ದೇಶದಿಂದ ಲ್ಯಾಂಡ್ ಅಗ್ರಿಗೇಟರ್ ಪೋರ್ಟಲ್ ಅನ್ನು ಅಭಿವೃದ್ಧಿಪಡಿಸಲಾಗಿದೆ.

ಈ ಪೋರ್ಟಲ್‌  ಮೂಲಕ ಭೂಮಾಲೀಕರು ತಮ್ಮ ಭೂಮಿಯನ್ನು ಇವಿ ಚಾರ್ಜಿಂಗ್ ಹಾಗೂ ಬ್ಯಾಟರಿ ವಿನಿಮಯ ಕೇಂದ್ರಗಳ ಸ್ಥಾಪನೆಗೆ ಆದಾಯ ಹಂಚಿಕೆ ಆಧಾರದ ಮೇಲೆ ಬಾಡಿಗೆಗೆ ಅಥವಾ ಭೋಗ್ಯಕ್ಕೆ ನೀಡಲು ಅವಕಾಶ ಇದೆ. ಅದೇ ರೀತಿ ವಿತರಕರು ಮತ್ತು ಚಾರ್ಜ್ ಪಾಯಿಂಟ್ ಆಪರೇಟರ್‌ಗಳು ಇವಿ ಚಾರ್ಜಿಂಗ್ ಕೇಂದ್ರಗಳ ಸ್ಥಾಪನೆ, ಕಾರ್ಯಾಚರಣೆ ಹಾಗೂ ನಿರ್ವಹಣೆಯನ್ನು ವಹಿಸಿಕೊಳ್ಳಬಹುದು. ಏಕ-ಗವಾಕ್ಷಿ ಡಿಜಿಟಲ್ ಡ್ಯಾಶ್‌ಬೋರ್ಡ್ ಮೂಲಕ ವಿದ್ಯುತ್ ಸಂಪರ್ಕವನ್ನು ಸಮಯಕ್ಕೆ ಸರಿಯಾಗಿ ಒದಗಿಸಿ, ವಿಳಂಬವನ್ನು  ಕಡಿಮೆ ಮಾಡುವುದರ ಜೊತೆಗೆ  ಎಲ್ಲಾ ಹಿತಾಸಕ್ತಿದಾರರ ನಡುವೆ ಸಮನ್ವಯ ಸಾಧಿಸಲು ನೆರವಾಗಲಿದೆ.

ಲ್ಯಾಂಡ್ ಅಗ್ರಿಗೇಟರ್ ಪೋರ್ಟಲ್, ಕರ್ನಾಟಕದಲ್ಲಿ ಬಲಿಷ್ಠ ಮತ್ತು ಭವಿಷ್ಯದ ಇವಿ ಪರಿಸರ ವ್ಯವಸ್ಥೆ ನಿರ್ಮಾಣದತ್ತ ಮಹತ್ವದ ಹೆಜ್ಜೆಯಾಗಿದೆ. ಭೂ ಸಂಗ್ರಾಹಕ ಹಾಗೂ ವಿದ್ಯುತ್ ಪೂರೈಕೆ  ಪ್ರಕ್ರಿಯೆಯನ್ನು ಸರಳಗೊಳಿಸುವ ಮೂಲಕ ಈ ಉಪಕ್ರಮವು ರಾಜ್ಯದ ಬದಲಾವಣೆಗೆ ಸಹಕಾರಿಯಾಗಿರುವ ಕಡಿಮೆ ಕಾರ್ಬನ್ ಆರ್ಥಿಕತೆಯತೆಯನ್ನು ಸಾಧಿಸಲಿದೆ ಹಾಗೂ ಸ್ಥಳೀಯ ಆರ್ಥಿಕ ಅವಕಾಶಗಳನ್ನು ಸೃಷ್ಟಿಸಿ, ಗ್ರಾಹಕರಿಗೆ ಇವಿ ಬಳಕೆಯನ್ನು ಉತ್ತೇಜಿಸಲಿದೆ.

ಲ್ಯಾಂಡ್ ಅಗ್ರಿಗೇಟರ್ ಪೋರ್ಟಲ್ ಬಿಡುಗಡೆಯು ಭವಿಷ್ಯದ  ಇವಿ ಮೂಲಸೌಕರ್ಯ ನಿರ್ಮಾಣದತ್ತ ಮಹತ್ವದ ಮೈಲಿಗಲ್ಲಾಗಿದೆ. ಇದು ಸ್ವಚ್ಛ ಚಲನಶೀಲತೆಯನ್ನು ಉತ್ತೇಜಿಸುವುದರ ಜೊತೆಗೆ ಸಾರ್ವಜನಿಕ–ಖಾಸಗಿ ಸಹಭಾಗಿತ್ವವನ್ನು ಬಲಪಡಿಸಿ, ಸ್ಥಳೀಯ ಸಮುದಾಯಗಳಿಗೆ ಆರ್ಥಿಕ ಅವಕಾಶಗಳನ್ನು ಸೃಷ್ಟಿಸುತ್ತದೆ. ಇವಿ ಚಾರ್ಜಿಂಗ್ ಮತ್ತು ಬ್ಯಾಟರಿ ವಿನಿಮಯ ಕೇಂದ್ರಗಳ ಸ್ಥಾಪನೆಯನ್ನು ಸುಲಭಗೊಳಿಸುವ ಮೂಲಕ, ಈ ಉಪಕ್ರಮವು ಕರ್ನಾಟಕವನ್ನು ಕಡಿಮೆ ಕಾರ್ಬನ್ ಆರ್ಥಿಕತೆಯತ್ತ ಮುನ್ನಡೆಸಲು ಸಹಕಾರಿಯಾಗಿದೆ ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಡಾ. ಎನ್. ಶಿವಶಂಕರ ತಿಳಿಸಿದರು.

*ಪೋರ್ಟಲ್‌ನ ಪ್ರಮುಖ  ಉದ್ದೇಶಗಳು* 

ಇವಿ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಬ್ಯಾಟರಿ ವಿನಿಮಯ ಕೇಂದ್ರಗಳ ಸ್ಥಾಪನೆಗೆ  ಭೂಮಿಯನ್ನು ಬಾಡಿಗೆಗೆ ನೀಡುವ ಅವಕಾಶಗಳಿಗೆ ಉತ್ತೇಜನ.

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಹಾಗೂ ಅನುಮೋದನಾ ಪ್ರಕ್ರಿಯೆ ಪ್ರಗತಿ ಪರಿಶೀಲನೆ

ಭೂಮಾಲೀಕರು ಸುಲಭವಾಗಿ ನೋಂದಣಿ ಮಾಡಿಕೊಂಡು ತಮ್ಮ ಭೂಮಿಯನ್ನು ಇವಿ ಚಾರ್ಜಿಂಗ್ ಮತ್ತು ಬ್ಯಾಟರಿ ವಿನಿಮಯ ಕೇಂದ್ರಗಳಿಗೆ ನೀಡುವ ವ್ಯವಸ್ಥೆ

ವೆಂಡರ್ಸ್‌ ಹಾಗೂ ಚಾರ್ಜ್ ಸ್ಟೇಷನ್‌ ಆಪರೇಟರ್‌ಗಳು ಚಾರ್ಜಿಂಗ್ ಮತ್ತು ಬ್ಯಾಟರಿ ವಿನಿಮಯ ಕೇಂದ್ರಗಳನ್ನು ಸ್ಥಾಪಿಸಿ ಹಾಗೂ ಅದರ ಕಾರ್ಯಾಚರಣೆಯನ್ನು ನಿರ್ವಹಿಸಬಹುದು.

ಪೋರ್ಟಲ್ ಮೂಲಕ ಬೆಸ್ಕಾಂ, ಚಾರ್ಜ್ ಸ್ಟೇಷನ್‌ ಆಪರೇಟರ್‌ಗಳೊಂದಿಗೆ ಸಂಪರ್ಕಿಸಿ ಇವಿ ಚಾರ್ಜಿಂಗ್ ಅಥವಾ ಬ್ಯಾಟರಿ ವಿನಿಮಯ ಕೇಂದ್ರಗಳ ಸ್ಥಾಪನೆಗೆ ಸಹಕಾರ ನೀಡಲಿದೆ.

ಭೂ ಮಾಲೀಕರು ಹಾಗೂ ಚಾರ್ಜ್ ಸ್ಟೇಷನ್‌ ಆಪರೇಟರ್‌ ಗಳು ಸ್ಥಳವನ್ನು ಅಂತಿಮಗೊಳಿಸಿ ಕಾರ್ಯಸಾಧನಾ ವರದಿಯನ್ನು ಪಡೆದ ನಂತರ, ಚಾರ್ಜಿಂಗ್‌ ಸ್ಟೇಷನ್‌ ಆಪರೇಟರ್‌ ಗಳು ಪೋರ್ಟ್‌ಲ್‌ ನ ಏಕ  ಗವಾಕ್ಷಿ ಡ್ಯಾಶ್‌ ಬೋರ್ಡ್‌ ಮೂಲಕ ವಿದ್ಯುತ್‌ ಸಂಪರ್ಕಕ್ಕೆ ಅರ್ಜಿ ಸಲ್ಲಿಸಬಹುದು. ಯಾವುದೇ ವಿಳಂಬವಿಲ್ಲದೆ, ವಿದ್ಯುತ್‌ ಸಂಪರ್ಕ ದೊರೆಯಲಿದೆ. ಅರ್ಜಿದಾರರು ಪೋರ್ಟಲ್‌ ಮೂಲಕ ತಮ್ಮ ಅರ್ಜಿಯ ಸ್ಥಿತಿಗತಿಯನ್ನು ಪರಿಶೀಲಿಸಬಹುದು.

“ಲ್ಯಾಂಡ್ ಅಗ್ರಿಗೇಟರ್ ಪೋರ್ಟಲ್‌,  ಖಾಸಗಿ ಭೂಮಾಲಿಕರು, ಸರ್ಕಾರಿ ಇಲಾಖೆಗಳು ಹಾಗೂ ಖಾಸಗಿ ಸಂಸ್ಥೆಗಳು ತಮ್ಮ ಭೂಮಿಯನ್ನು ನೀಡಲು ಹಾಗೂ ಚಾರ್ಜಿಂಗ್ ಸ್ಟೇಷನ್‌ ಆಪರೇಟರ್‌ಗಳು ರಾಜ್ಯಾದ್ಯಂತ ಇವಿ ಚಾರ್ಜಿಂಗ್ ಮತ್ತು ಬ್ಯಾಟರಿ ವಿನಿಮಯ ಕೇಂದ್ರಗಳನ್ನು ಸ್ಥಾಪಿಸಲು ಒಂದೇ ವೇದಿಕೆಯಾಗಿ ಕಾರ್ಯನಿರ್ವಹಿಸುತ್ತದೆ. ಆದಾಯ ಹಂಚಿಕೆ ಮಾದರಿಯಲ್ಲಿ ಭೂಮಿಯನ್ನು ಬಾಡಿಗೆಗೆ ನೀಡಲು ಇದು ಅವಕಾಶ ಕಲ್ಪಿಸುತ್ತದೆ,” ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ..

Ramesh Babu

Journalist

Recent Posts

ಗುರುಭವನದಲ್ಲಿ ಅದ್ಧೂರಿ ವಿಶ್ವ ಮಹಿಳಾ ದಿನಾಚರಣೆ

ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…

3 hours ago

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಲಂಚಕ್ಕೆ ಬೇಡಿಕೆ: ಲೋಕಾ ಬಲೆಗೆ ಬಿದ್ದ ಭ್ರಷ್ಟ ಗ್ರಾಮ ಆಡಳಿತಾಧಿಕಾರಿ

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…

4 hours ago

ಯುಗಾದಿ ಸಮಯದಲ್ಲಿ ಮತ್ತೆ ಚಿಗುರಿದ ಪ್ರೀತಿ: ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದವರು ಕಟೆಕಟೆಯಲ್ಲಿ ಒಂದಾದರು: ಒಂದಾದ ದಂಪತಿಗೆ ಪ್ರೀತಿಯ ಪಾಠ ಹೇಳಿದ ನ್ಯಾಯಾಧೀಶರು

ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…

6 hours ago

ವಾರದೊಳಗೆ ಸಹಜ ಸ್ಥಿತಿಗೆ ಗ್ಯಾಸ್ ಸಿಲಿಂಡರ್ ಪೂರೈಕೆ- ಆಹಾರ ಸಚಿವ ಕೆ.ಎಚ್ ಮುನಿಯಪ್ಪ

ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…

7 hours ago

“ಗೃಹಬಳಕೆ ಸಿಲಿಂಡರ್ ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನು ಕ್ರಮ”

ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…

7 hours ago

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ: ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಏನಂದ್ರು ಗೊತ್ತಾ….?

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ…

8 hours ago