Categories: ಕೋಲಾರ

ಬೆಸ್ಕಾಂ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆ ಭರ್ತಿಗಾಗಿ ಆಗ್ರಹ

ಕೋಲಾರ: ಬೆಸ್ಕಾಂ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿ ಗಾಳಿ ಮಳೆಯಿಂದ ಆಗುತ್ತಿರುವ ಸಮಸ್ಯೆಗಳಿಗೆ ಸ್ಪಂಧಿಸುವ ಜೊತೆಗೆ ಇಲಾಖೆಯಲ್ಲಿ ನಡೆದಿರುವ ಕೋಟ್ಯಾಂತರ ರೂಪಾಯಿ ಭ್ರಷ್ಟಾಚಾರ ತನಿಖೆ ಮಾಡಲು ವಿಶೇಷ ತಂಡ ರಚನೆ ಮಾಡಬೇಕಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಇಂಧನ ಸಚಿವರನ್ನು ಒತ್ತಾಯಿಸಿದರು.

ಗಡಿಭಾಗದ ಕಾಮಸಮುದ್ರ ಉಪ ವಿದ್ಯುತ್ ಕೇಂದ್ರದ ಮುಂದೆ ಮಾತನಾಡಿದ ರವರು ಜಿಲ್ಲಾಧ್ಯಂತ ವಿದ್ಯುತ್ ವಿತರಣಾ ಕಂಪನಿಗಳಲ್ಲಿ ಸಿಬ್ಬಂದಿ ಕೊರತೆ ಇದ್ದು, ಸಮರ್ಪಕವಾಗಿ ವಿದ್ಯುತ್ ಸಮಸ್ಯೆ ಸೇವೆ ಮಾಡಲು ಸಾಧ್ಯವಾಗದೆ ಪರದಾಡುತ್ತಿದ್ದರೂ ಸಮಸ್ಯೆಯಲ್ಲಿ ಗಂಭೀರವಾಗಿ ಪರಿಗಣಿಸುವಲ್ಲಿ ಇಂಧನ ಸಚಿವರು ವಿಫಲವಾಗಿದ್ದಾರೆಂದು ಆಕ್ರೋಷ ವ್ಯಕ್ತಪಡಿಸಿದರು.

ಬೆಸ್ಕಾಂ ಇಲಾಖೆ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಚಿನ್ನದ ಮೊಟ್ಟೆ ಇಡುವ ಇಲಾಖೆಯಾಗಿದೆ ಟ್ರಾರ್ನ್ಸ್ಫಾರಂನಿಂದ ಹಿಡಿದು ಆಯಿಲ್ ದಂದೆ, ಜೊತೆಗೆ ಹಳೆ ಕಂಬ ತಂತಿ ಪರಿವರ್ತಕಗಳನ್ನು ಮಾಹಿತಿ ಇಲ್ಲದೆ ಮಾರಾಟ ಮಾಡಿ ಕೋಟ್ಯಾಂತರ ರೂಪಾಯಿ ಹಗಲು ದರೋಡೆ ಮಾಡುತ್ತಿರುವ ಹಾಗೂ ನಕಲಿ ದಾಖಲೆಗಳನ್ನು ಸೃಷ್ಟಿ ಮಾಡುತ್ತಿರುವ ಅಧಿಕಾರಿಗಳ ವಿರುದ್ದ ಕ್ರಮ ವಿಲ್ಲವೆ ಏಕೆ ಎಂದು ಪ್ರಶ್ನೆ ಮಾಡಿದರು.

ಮಳೆಗಾಲ ಆರಂಭದೊಂದಿಗೆ ಗ್ರಾಮೀಣ ಹಾಗೂ ನಗರ ಭಾಗಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ಪದೇ ಪದೇ ವ್ಯತ್ಯೆಯವಾಗುತ್ತಿದೆ. ಆಗಾಗಿ ವಿದ್ಯುತ್ ಕಡಿತವಾಗುತ್ತಿದ್ದು, ಗಾಳಿ ಮಳೆಯ ಕಾರಣಕ್ಕೆ ಬೆಸ್ಕಾಂಗೆ ನೂರಾರು ದೂರುಗಳು ರೈತರು ಹಾಗೂ ಜನ ಸಾಮಾನ್ಯರಿಂದ ಬರುತ್ತಿದ್ದರೂ ಸಮರ್ಪಕವಾಗಿ ನಿರ್ವಹಿಸಲಾಗದೆ ಗಾಳಿ ಮಳೆಗೆ ಬಿದ್ದಿರುವ ಕಂಬಗಳು ಸುಟ್ಟಿರುವ ಟ್ರಾರ್ನ್ಸ್ಫಾರಂಗಳು ಹಾಗೂ ತುಂಡಾಗಿರುವ ತಂತಿಗಳು ಮರಗಡಿಗಳನ್ನು ತೆರವುಗೊಳಿಸಲು ಅರಸಾಹಸ ಪಡುವ ಜೊತೆಗೆ ಸಿಬ್ಬಂದಿಗೆ ಒತ್ತಡ ಹೆಚ್ಚಾಗಿ ಆರೋಗ್ಯ ಕೆಡಿಸಿಕೊಳ್ಳುತ್ತಿದ್ದರೂ, ಸರ್ಕಾರಕ್ಕೆ ಕನಿಕರವಿಲ್ಲ ಎಂದು ಅಸಮದಾನ ವ್ಯಕ್ತಪಡಿಸಿದರು.

ತಾಲ್ಲೂಕು ಅಧ್ಯಕ್ಷ ಕದರಿನತ್ತ ಅಪ್ಪೋಜಿರಾವ್ ಮಾತನಾಡಿ ಅತಿಹೆಚ್ಚು ಅರಣ್ಯವಿರುವ ಗಡಿಭಾಗದಲ್ಲಿರುವ ಕಾಮಸಮುದ್ರ ವ್ಯಾಪ್ತಿಯಲ್ಲಿ ಮಳೆ ಬಂದರೆ ಮರಗಳ ಕೊಂಬೆಗಳು ಕಂಬಗಳ ಮೇಲೆ ಬಿದ್ದು ತಂತಿಗಳು ತುಂಡಾಗಿ ಟ್ರಾರ್ನ್ಸ್ಫಾರಂಗಳು ಸುಟ್ಟುಹೋಗಿ ಅದನ್ನು ತೆರವುಗೊಳಿಸಲು ಮೂರು ನಾಲ್ಕು ದಿನ ಬೇಕಾಗುತ್ತದೆ. ಇದರಿಂದ ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿರುವ ಬೆಳೆ ಒಂದು ಕಡೆ ನಾಶವಾದರೆ ಮತ್ತೊಂದು ಕೊಡೆ ಕುಡಿಯುವ ನೀರಿಗೆ ಪರದಾಡಬೇಕಾದ ಪರಿಸ್ಥಿತಿ ಇರುವುದರಿಂದ ಜನ ಸಾಮಾನ್ಯರು ಇಲಾಖೆಗೆ ಇಡೀ ಶಾಪ ಹಾಕುವಂತಾಗಿದೆ.
ಸಿಬ್ಬಂದಿ ಕೊರತೆಯ ಕಾರಣಕ್ಕೆ ಹಾಲಿ ನೌಕರರಿಗೆ ಹೆಚ್ಚಿನ ಜವಾಬ್ದಾರಿ ನೀಡಿ ಪರಿಸ್ತಿತಿ ನಿಬಾಯಿಸಲಾಗುತ್ತಿದೆ. ಲೈನ್ ಮ್ಯಾನ್ ಮೀಟರ್ ರೀಡರ್, ಹಾಗೂ ಇಂಜಿನಿಯರ್‌ಗಳಿಂದ ನಿಗಧಿತ ಸಮಯಕ್ಕಿಂತ ಹೆಚ್ಚಿನ ಅವಧಿಯೊಳಗೆ ಕೆಲಸ ಮಾಡಲಾಗುತ್ತಿದೆ. ಇದರಿಂದ ಹಾಲಿ ಸಿಬ್ಬಂದಿ ಮೇಲೆ ಕಾರ್ಯಒತ್ತಡ ಎಚ್ಚಿ ಅವರ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮವಾಗುತ್ತಿದೆ. ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಬೆಸ್ಕಾಂ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಇಂಧನ ಸಚಿವರಿಗೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ರಾಜ್ಯ ಮುಖಂಡ ಮರಗಲ್ ಶ್ರೀನಿವಾಸ್, ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ, ಮುನಿಕೃಷ್ಣ, ವಿಶ್ವ, ಸಂತೋಷ್, ಲಕ್ಷ್ಮಣ್ ಶ್ರೀರಾಮರೆಡ್ಡಿ, ಯಲ್ಲೋಜಿರಾವ್, ಕೃಷ್ಣಪ್ಪ, ಬಾಬುರಾವ್, ಮುನಿರಾಜು ಮುಂತಾದವರು ಇದ್ದರು.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

2 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

7 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

7 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

12 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

23 hours ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

24 hours ago