ಅಪರಿಚಿತ ವ್ಯಕ್ತಿಯೋರ್ವ ಚಲಿಸುತ್ತಿದ್ದ ಕ್ಯಾಂಟರ್ ಕೆಳಗೆ ಹಾರಿ ಚಕ್ರಕ್ಕೆ ಸಿಲುಕಿ ಬೇಕಂತಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ರಾತ್ರಿ ಸುಮಾರು 9ಗಂಟೆ ಸಮಯದಲ್ಲಿ ನಗರದ ಇಸ್ಲಾಂಪುರದಲ್ಲಿ ನಡೆದಿದೆ.
ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಲಾರಿಯ ಚಕ್ರ ಅಪರಿಚಿತ ವ್ಯಕ್ತಿಯ ಮೇಲೆ ಹರಿದಿದ್ದು, ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
ತನ್ನ ಪಾಡಿಗೆ ತಾನು ರಸ್ತೆ ಬದಿಯಲ್ಲಿ ಕೈಕಟ್ಟಿಕೊಂಡು ನಿಂತ್ತಿದ್ದಾತ ನೋಡ ನೋಡುತ್ತಲೇ ದಿಢೀರನೆ ಚಲಿಸುತ್ತಿದ್ದ ಕ್ಯಾಂಟರ್ ಲಾರಿಗೆ ಕೆಳಗೆ ಹಾರಿ ಚಕ್ರಕ್ಕೆ ತಲೆ ಕೊಟ್ಟಿದ್ದಾನೆ. ವ್ಯಕ್ತಿಯ ಊರು, ಹೆಸರು ಎಂಬಿತ್ಯಾದಿ ತಿಳಿದು ಬಂದಿಲ್ಲ.
ವ್ಯಕ್ತಿಯ ಆತ್ಮಹತ್ಯೆಗೆ ಏನು ಕಾರಣ ಎಂಬುದು ಸಹ ತಿಳಿದುಬಂದಿಲ್ಲ. ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮೇಲ್ನೋಟಕ್ಕೆ ಕಂಡುಬಂದಿದೆ. ಸ್ಥಳಕ್ಕೆ ನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.