ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಬೀಜಗಳ ದರ ಕಡಿಮೆ ಇದೆ- ಸಿಎಂ‌ ಸಿದ್ದರಾಮಯ್ಯ

2023-24ನೇ ಸಾಲಿನ ಭೀಕರ ಬರಗಾಲದಿಂದಾಗಿ ರಾಜ್ಯದಲ್ಲಿ ಬೀಜೋತ್ಪಾದನೆ ಗಣನೀಯವಾಗಿ ಕುಂಠಿತವಾಗಿದ್ದು, ಬೀಜೋತ್ಪಾದಕರಿಂದ ಖರೀದಿಸುವ ಬಿತ್ತನೆ ಬೀಜದ ದರಗಳು ಸಹ ಗಣನೀಯವಾಗಿ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಬಿತ್ತನೆ ಬೀಜದ ಮಾರಾಟದ ದರ ಏರಿಕೆಯಾಗಿದೆ. ಈ ದರ ಏರಿಕೆ ಮುಂಗಾರು ಬೆಳೆ ಬೆಳೆಯುವ ಎಲ್ಲ ರಾಜ್ಯಗಳಲ್ಲಿಯೂ ಆಗಿದ್ದು ಉಳಿದ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ ಬೀಜಗಳ ದರ ಕಡಿಮೆ ಇದೆ ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ

ಬಿತ್ತನೆ ಬೀಜಗಳ ಮಾರಾಟ ದರಗಳನ್ನು ನಿಗದಿಪಡಿಸುವ ಸಂದರ್ಭಗಳಲ್ಲಿ ಬಿತ್ತನೆ ಬೀಜ ಖರೀದಿ ದರಗಳು ಹಾಗೂ ಗರಿಷ್ಠ APMC ಮಾರಾಟ ದರಗಳನ್ನು ಆಧಾರವಾಗಿ ಪರಿಗಣಿಸಲಾಗುತ್ತದೆ. 2022-23ನೇ ಸಾಲಿಗೆ ಹೋಲಿಸಿದಾಗ 2023-24ನೇ ಸಾಲಿನಲ್ಲಿ ವಿವಿಧ ಬೆಳೆಗಳ ಖರೀದಿ ದರಗಳಲ್ಲಿ (Procurement Rates) ಗರಿಷ್ಠ ಶೇ.59.58ರಷ್ಟು ವ್ಯತ್ಯಾಸವಾಗಿರುತ್ತದೆ. ರೈತರು ತಮ್ಮ ಜಮೀನಿನಲ್ಲಿಯೇ ಬೀಜಗಳನ್ನು ಉತ್ಪಾದನೆ ಮಾಡುತ್ತಾರೆ. ಇದನ್ನು ಕರ್ನಾಟಕ ರಾಜ್ಯ ಬೀಜ ನಿಗಮ ನಿ., ರಾಷ್ಟ್ರೀಯ ರಾಜ್ಯ ಬೀಜ ನಿ., ಕರ್ನಾಟಕ ಎಣ್ಣೆಬೀಜ ಬೆಳೆಗಾರರ ಮಹಾ ಮಂಡಳಿ ಹಾಗೂ ಖಾಸಗಿ ಸಂಸ್ಥೆಗಳು ಕೈಗೊಂಡು ಸರಬರಾಜು ಮಾಡುತ್ತವೆ‌ ಎಂದು ಹೇಳಿದ್ದಾರೆ.

ಈ ಬಾರಿ ಹೆಸರು ಬೆಳೆಯ ಬಿತ್ತನೆ ಬೀಜಗಳ ಎಲ್‌-1 ದರವು ಶೇ.48.5, ಉದ್ದು ಬೆಳೆಯ ದರವು ಶೇ.37.72, ತೊಗರಿ ಬೆಳೆಯ ವಿವಿಧ ತಳಿಗಳ ಬಿತ್ತನೆ ಬೀಜಗಳ ದರದಲ್ಲಿ ಶೇ.28.29 ರಿಂದ 37.69ರಷ್ಟು ಮತ್ತು ಜೋಳದ ಬೆಳೆಯ ಎಲ್‌-1 ದರವು ಶೇ.7.66 ರಿಂದ ಶೇ.33.33ರಷ್ಟು ಹೆಚ್ಚಾಗಿರುತ್ತದೆ. ಬೀಜಗಳ ಖರೀದಿ ದರದಲ್ಲಿನ ಹೆಚ್ಚಳದ ಮೊತ್ತವು ಬೀಜೋತ್ಪಾದನೆಯಲ್ಲಿ ತೊಡಗಿರುವ ರೈತರಿಗೆ ವರ್ಗಾವಣೆಯಾಗಿರುತ್ತದೆ ಎನ್ನುವುದು ಗಮನಾರ್ಹ ಅಂಶವಾಗಿದೆ ಎಂದು ತಿಳಿಸಿದ್ದಾರೆ.

ಇದಲ್ಲದೆ ಕೆಲ ಬಿತ್ತನೆ ಬೀಜದ ದರದಲ್ಲಿ ಇಳಿಕೆ ಹಾಗೂ ಯಥಾಸ್ಥಿತಿ ಕೂಡ ಕಂಡುಬಂದಿದೆ. 2024ರ ಮುಂಗಾರು ಹಂಗಾಮಿನ ಸೋಯಾಅವರೆ ಬಿತ್ತನೆ ಬೀಜದ ದರವು 2023ರ ಮುಂಗಾರು ಹಂಗಾಮಿನ ಎಲ್‌-1 ದರಗಳ ಹೋಲಿಕೆಯಲ್ಲಿ ಶೇ.8ರಷ್ಟು ಕಡಿತಗೊಂಡಿರುತ್ತದೆ. ಸೂರ್ಯಕಾಂತಿ ಬಿತ್ತನೆ ಬೀಜದ ದರ ಕಳೆದ ಸಾಲಿನಷ್ಟೇ ಇದ್ದು ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಹೇಳಿದ್ದಾರೆ.

ಬಿ.ಟಿ. ಹತ್ತಿ ಬಿತ್ತನೆ ಬೀಜಗಳನ್ನು ರಾಜ್ಯ ಸರ್ಕಾರದ ಇಲಾಖಾ ವತಿಯಿಂದ ರಿಯಾಯತಿ ದರದಲ್ಲಿ ವಿತರಣೆ ಮಾಡುತ್ತಿರುವುದಿಲ್ಲ. ಬಿ.ಟಿ. ಹತ್ತಿ ಬಿತ್ತನೆ ಬೀಜಗಳ ಗರಿಷ್ಠ ದರಗಳನ್ನು ಕೇಂದ್ರ ಸರ್ಕಾರದ ವತಿಯಿಂದಲೇ ನಿಗದಿಪಡಿಸಲಾಗುತ್ತದೆ. ರಾಜ್ಯದಲ್ಲಿನ ವಿವಿಧ ಬೆಳೆಗಳ ಬಿತ್ತನೆ ಬೀಜಗಳಲ್ಲಿನ ದರ ವ್ಯತ್ಯಾಸವು 2023ರ ಹೋಲಿಕೆಯಲ್ಲಿ ಈ ಬಾರಿ ಗರಿಷ್ಠ ಶೇ.48.50ರಷ್ಟಿದೆ. ಆದಾಗ್ಯೂ, ನೆರೆಯ ರಾಜ್ಯಗಳಲ್ಲಿನ ಪ್ರಸಕ್ತ ಸಾಲಿನ ಬಿತ್ತನೆ ಬೀಜಗಳ ದರಗಳ ಏರಿಕೆಯ ಹೋಲಿಕೆಯಲ್ಲಿ ರಾಜ್ಯದಲ್ಲಿನ ಬಿತ್ತನೆ ಬೀಜಗಳ ದರದ ಏರಿಕೆಯು ಕಡಿಮೆಯಾಗಿರುತ್ತದೆ.

ಉದಾಹರಣೆಗೆ ಮಹಾರಾಷ್ಟ್ರದಲ್ಲಿ ಸೋಯಾಅವರೆ ಬೆಳೆಗೆ ಪ್ರತಿ ಕ್ವಿಂಟಾಲ್‌ಗೆ ಎಲ್‌-1 ದರವು ರೂ.8500/- ನಿಗದಿಯಾಗಿದ್ದು ಕರ್ನಾಟಕದಲ್ಲಿ ಇದು ರೂ.7270/- ನಿಗದಿಯಾಗಿದೆ. ಅದೇ ರೀತಿ, ತೊಗರಿ ಬೆಳೆಗೆ ಮಹಾರಾಷ್ಟ್ರದಲ್ಲಿ ಪ್ರತಿ ಕ್ವಿಂಟಾಲ್‌ಗೆ ರೂ.25,000/- ಇದ್ದು ಕರ್ನಾಟಕದಲ್ಲಿ ಪ್ರತಿ ಕ್ವಿಂಟಾಲ್‌ಗೆ ರೂ.17,900/- ನಿಗದಿಪಡಿಸಲಾಗಿದೆ. ಹೆಸರು ಮತ್ತು ಜೋಳದ ಬೆಳೆಗೆ ಪ್ರತಿ ಕ್ವಿಂಟಾಲ್‌ಗೆ ಮಹಾರಾಷ್ಟ್ರದಲ್ಲಿ ಕ್ರಮವಾಗಿ ರೂ.23,500/- ರೂ. 14,000/- ಇದ್ದು ಕರ್ನಾಟಕದಲ್ಲಿ ಕ್ರಮವಾಗಿ ರೂ.18,600/- ರೂ.12,500/- ನಿಗದಿಪಡಿಸಲಾಗಿದೆ. ಈ ಹೋಲಿಕೆಯಲ್ಲಿ ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ ವಿವಿಧ ಬೆಳೆಗಳ ಬಿತ್ತನೆ ಬೀಜಗಳ ದರಗಳು ಗಣನೀಯವಾಗಿ ಕಡಿಮೆ ಇರುವುದು ಕಂಡುಬರುತ್ತದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯು ಉತ್ತಮವಾಗಿ ಆಗುತ್ತಿದ್ದು ಕೃಷಿ ಚಟುವಟಿಕೆಗಳು ಗರಿಗೆದರಿವೆ. ಇದೇ ವೇಳೆ, ಬಿತ್ತನೆ ಬೀಜಗಳ ದರಗಳು ಏರಿಕೆಯಾಗಿರುವ ಬಗ್ಗೆ ವಿವಿಧ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದು ಈ ಕುರಿತು ಕೃಷಿ ಇಲಾಖೆಯು ಸ್ಪಷ್ಟೀಕರಣ ನೀಡಿದ್ದು ವಾಸ್ತವ ಸ್ಥಿತಿಯನ್ನು ವಿವರಿಸಿದೆ ಎಂದು ಹೇಳಿದ್ದಾರೆ.

Ramesh Babu

Journalist

Recent Posts

ಮಹಾವೀರ ಜಯಂತಿ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…

6 hours ago

ನಾನು ಯಾರ ಜಮೀನು ಕಬಳಿಕೆ‌ ಮಾಡಿಲ್ಲ- ಕಾನೂನಾತ್ಮಕವಾಗಿ ಜಮೀನು ಖರೀದಿ ಮಾಡಿದ್ದೇನೆ- ನನ್ನ ಏಳಿಗೆ ಸಹಿಸದವರಿಂದ ನನ್ನ ಮೇಲೆ ಹಲ್ಲೆ ನಡೆದಿದೆ- ಕಾನೂನು ಹೋರಾಟ ಮಾಡಿ ಗೆಲ್ಲುವೆ- ವಕೀಲ ಪ್ರತಾಪ್

ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…

6 hours ago

KIADB ಭೂಸ್ವಾಧೀನ ವಿರೋಧಿಸಿ ತಾಲೂಕು ಕಚೇರಿಗೆ ಟ್ರ್ಯಾಕ್ಟರ್ ರ್ಯಾಲಿ

ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ  ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…

14 hours ago

ಹುಟ್ಟಿಸುವವನೂ ಅವನೇ…. ಸಾಯಿಸುವವನೂ ಅವನೇ…

ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…

20 hours ago

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ-ಎನ್.ಶೋಭಾ

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…

1 day ago

ಮನೆ ಹೊಸ್ತಿಲಿನಲ್ಲಿ ಪೂಜೆಗಿಟ್ಟಿದ್ದ ಒಣಗಿದ ದಾಸವಾಳ ಹೂ ನುಂಗಿ ಆರುವರೆ ತಿಂಗಳ ಮಗು ದಾರುಣ ಸಾವು

ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…

1 day ago