ರೈತರ ಆದಾಯ ದ್ವಿಗುಣವಾದಾಗ ಮಾತ್ರ ರೈತರಿಗೆ ಕೃಷಿ ಲಾಭದಾಯಕ ಉದ್ಯಮ ಆಗುತ್ತದೆ. ಆದರೆ ರೈತರ ಆದಾಯ ದ್ವಿಗುಣಗೊಳ್ಳಲು ಕೃಷಿಯಿಂದ ಮಾತ್ರ ಸಾಧ್ಯವಾಗೋದಿಲ್ಲ, ಹೆಚ್ಚು ಹೆಚ್ಚು ಕೃಷಿಗೆ ಸಂಬಂಧಿಸಿದ ಉಪಕಸುಬುಗಳನ್ನು ಅಳವಡಿಸಿಕೊಂಡಾಗ ಮಾತ್ರ ಆದಾಯ ದ್ವಿಗುಣ ಆಗುತ್ತದೆ ಎಂದು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್.ವಿ.ಸುರೇಶ್ ತಿಳಿಸಿದರು.
ತಾಲೂಕಿನ ಹಾಡೋನಹಳ್ಳಿಯಲ್ಲಿರುವ ಕೃಷಿ ವಿಜ್ಞಾನ ಕೇಂದ್ರದಲ್ಲಿ 2023-24ನೇ ಸಾಲಿನ ಪೂರ್ವ ಮುಂಗಾರು ಕೃಷಿ ತಾಂತ್ರಿಕ ಆಂದೋಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಉಪಕಸುಬು ಬಗ್ಗೆ ರೈತರಿಗೆ ಅರಿವು ಮೂಡಿಸುವ ಸಲುವಾಗಿ ಸೆಕೆಂಡರಿ ಕೃಷಿ ನಿರ್ದೇಶನಾಲಯವನ್ನ ಸ್ಥಾಪನೆ ಮಾಡಲಾಗಿದೆ. ಈ ನಿರ್ದೇಶನಾಲಯವು ರೈತರಿಗೆ ಉಪಕಸುಬುನ್ನ ಕೃಷಿಯಲ್ಲಿ ಯಾವ ರೀತಿ ಅಳವಡಿಸಿಕೊಳ್ಳಬೇಕು, ಬೆಳೆ ಬೆಳೆಯುವುದು ಹೇಗೆ, ಬೆಳೆಯನ್ನು ಯಾವ ರೀತಿ ಸಂಸ್ಕರಣೆ ಮಾಡುವುದು, ಸಂಸ್ಕರಣೆ ಮಾಡಿರುವುದನ್ನ ಮಾರುಕಟ್ಟೆಯಲ್ಲಿ ಮಾರಾಟ ಮಾಡುವ ಕೌಶಲ್ಯತೆಯನ್ನ ರೈತರಿಗೆ ಕಲ್ಪಿಸಿ, ಕಲಿಸಿಕೊಡುತ್ತದೆ. ಇದರ ಸದುಪಯೋಗವನ್ನು ರೈತರು ಪಡೆದು ತಮ್ಮ ಆದಾಯವನ್ನು ದ್ವಿಗುಣ ಮಾಡಿಕೊಳ್ಳಬೇಕು ಎಂದು ರೈತರಿಗೆ ಸಲಹೆ ನೀಡಿದರು.
ನಂತರ ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಲಲಿತಾ ರೆಡ್ಡಿ ಮಾತನಾಡಿ, ಈಗಾಗಲೇ ಮುಂಗಾರು ಪ್ರಾರಂಭವಾಗಿದೆ. ರೈತರಿಗೆ ಬೇಕಾದಂತಹ ಬಿತ್ತನೆ ಬೀಜ, ರಸ ಗೊಬ್ಬರ ಸೇರಿದಂತೆ ಕೃಷಿ ಪರಿಕರಗಳ ದಾಸ್ತಾನು ಮಾಡಲಾಗಿದೆ. ಸಕಾಲಕ್ಕೆ ರೈತರಿಗೆ ಅನುಕೂಲವಾಗುವಂತೆ ಕೃಷಿ ಇಲಾಖೆ ಸರ್ವ ಸನ್ನದ್ಧವಾಗಿದೆ ಎಂದರು.
ಹಾಗೇ ನಮ್ಮ ಕೃಷಿ ವಿಜ್ಞಾನಿಗಳು ರೈತರ ಬಳಿ ಹೋಗಿ ಕೃಷಿ ಚಟುವಟಿಕೆಯಲ್ಲಿ ಹೊಸ ಹೊಸ ತಂತ್ರಜ್ಞಾನವನ್ನು ಹೇಗೆ ಬಳಸಿಕೊಳ್ಳುವುದು, ಬೆಳೆ ಸಂರಕ್ಷಣೆ, ಸಂಸ್ಕರಣೆ, ನಿರ್ವಹಣೆ ಸೇರಿದಂತೆ ಇತರೆ ವಿಷಯಗಳ ಬಗ್ಗೆ ತರಬೇತಿಯನ್ನು ನೀಡುವ ಕೆಲಸ ಮಾಡುತ್ತಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಕೃಷಿ ವಿಶ್ವವಿದ್ಯಾಲಯದಿಂದ ಬಿಡುಗಡೆಗೊಂಡ ನೂತನ ತಳಿಗಳು ಮತ್ತು ತಂತ್ರಜ್ಞಾನ ಬಗ್ಗೆ ರೈತರಿಗೆ ಅರಿವು, ಮುಂಗಾರು ಹಂಗಾಮಿನಲ್ಲಿ ಮಣ್ಣು ಮತ್ತು ತೇವಾಂಶ ಸಂಸ್ಕರಣೆ ಕ್ರಮ, ವಿವಿಧ ಬೆಳೆಗಳ ಬೇಸಾಯ ಕ್ರಮ, ಸಸ್ಯ ಸಂಸ್ಕರಣೆ ಕ್ರಮ, ರಾಷ್ಟ್ರೀಯ ಬೀಜ ಪ್ರಾಯೋಜನೆ, ಕೃಷಿ ವಸ್ತು ಪ್ರದರ್ಶನ, ಬೀಜ ಮಾರಾಟ ಸೇರಿದಂತೆ ಇತರೆ ರೈತ ಸ್ನೇಹಿ ಮಾಹಿತಿ ಒದಗಿಸಲಾಗಿತ್ತು.
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…
ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…
ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…
ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…
ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…
ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…