ಇದು ಈಗ “ಬೇಸಿಗೆ ಬಿಸಿಲು” ಮಾತ್ರವಲ್ಲ; ಇದು ಸಾರ್ವಜನಿಕ ಆರೋಗ್ಯ ಮತ್ತು ಆರ್ಥಿಕ ಬಿಕ್ಕಟ್ಟಾಗಿ ರೂಪಾಂತರಗೊಳ್ಳುವ ಮುನ್ಸೂಚನೆ ನೀಡುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.
ಭಾರತಕ್ಕೆ ತುರ್ತಾಗಿ ಉತ್ತಮ ಗ್ರಾಮೀಣ ಮತ್ತು ನಗರ ಹೀಟ್ ಆಕ್ಷನ್ ಪ್ಲಾನ್‌ಗಳು ಹಾಗೂ ತ್ವರಿತ ಹಸಿರೀಕರಣದ ಅಗತ್ಯವಿದೆ. ಪಂಚಾಯತ್ ರಾಜ್ ಇಲಾಖೆ ಮತ್ತು ಅರಣ್ಯ ಇಲಾಖೆ ಜಂಟಿಯಾಗಿ ಈ ಯೋಜನೆಯನ್ನು ಜಾರಿಗೆ ತರಲು ಸೂಕ್ತ ನೀತಿ ಚೌಕಟ್ಟನ್ನು ಪರಿಶೀಲಿಸಿ ಮೌಲ್ಯಮಾಪನ ಮಾಡಲಿವೆ ಎಂದು ತಿಳಿಸಿದ್ದಾರೆ.
ಸ್ಥಳೀಯ ಆಡಳಿತ, ಸಮುದಾಯ ಭಾಗವಹಿಸುವಿಕೆ ಮತ್ತು ಪರಿಸರ ಮರುಸ್ಥಾಪನೆಯನ್ನು ಒಟ್ಟುಗೂಡಿಸುವ ಪ್ರಾಯೋಗಿಕ, ಸುಸ್ಥಿರ ಹಾಗೂ ಇನ್ನಷ್ಟು ವಿಸ್ತರಿಸಬಹುದಾದ ಮಾದರಿಯನ್ನು ರಚಿಸುವುದು ಇದರ ಉದ್ದೇಶವಾಗಿರುತ್ತದೆ. ಈ ಧಗೆ ಕೇವಲ ಹವಾಮಾನ ಸುದ್ದಿಯಷ್ಟೇ ಅಲ್ಲ. ಇದು ಒಂದು ಎಚ್ಚರಿಕೆ ಎಂದು ಹೇಳಿದ್ದಾರೆ..
ದೊಡ್ಡಬಳ್ಳಾಪುರ: ಬರಗಾಲದ ಸಂದರ್ಭದಲ್ಲಿ ಜಲಮೂಲಗಳ ಸಂರಕ್ಷಣೆ ಹಾಗೂ ಕೆರೆಗಳ ಪುನಶ್ಚೇತನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೈಗೊಳ್ಳುತ್ತಿರುವ ಕೆರೆ…
ದೇವನಹಳ್ಳಿ: ಹಾಸ್ಟೆಲ್ ಕೊಠಡಿಯಲ್ಲಿ ಡಿಪ್ಲೋಮಾ ವಿದ್ಯಾರ್ಥಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಚನ್ನರಾಯಪಟ್ಟಣ ಗ್ರಾಮದಲ್ಲಿರುವ ಸರ್ಕಾರಿ ಉಪಕರಣಾಗಾರ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ತೇಜಸ್ವಿನಿ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢಶಾಲಾ…
ಬೆಂಗಳೂರು ಗ್ರಾಮಾಂತರ: ಮಳೆ ಕೈಕೊಟ್ಟ ಪರಿಣಾಮ ಕೃಷಿ ಬೆಳೆಗಳ ಜತೆಗೆ ಜಾನುವಾರುಗಳ ಮೇವಿನ ಮೇಲೂ ಬರದ ಕರಿನೆರಳು ಆವರಿಸುತ್ತಿರುವ ಹಿನ್ನೆಲೆಯಲ್ಲಿ…
ದೇವನಹಳ್ಳಿ: ನಕಲಿ ಔಷಧಿಗಳ ಮಾರಾಟ ಜಾಲಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ, ಪ್ರಕರಣದ ಕಿಂಗ್‌ಪಿನ್ ಎಂದು ಪೊಲೀಸರು ಗುರುತಿಸಿರುವ ಪ್ರಶಾಂತ್…
ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆಯ ಕೊರತೆಯಿಂದ ಈಗಾಗಲೇ ಸಂಕಷ್ಟಕ್ಕೆ ಸಿಲುಕಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರಿಗೆ ಇದೀಗ ಮತ್ತೊಂದು ಆತಂಕ…