ಪ್ರಸ್ತುತ ಬೇಸಿಗೆ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಧಿಕ ಉಷ್ಣಾಂಶ ದಾಖಲಾಗುತ್ತಿದ್ದು, ಬಿಸಿಲಿನ ತೀವ್ರತೆಗೆ ಜನ ಸಾಮಾನ್ಯರಿಗೆ ಮಾತ್ರವಲ್ಲದೆ ಪಕ್ಷಿಗಳಿಗೆ ಕೂಡಾ ಕುಡಿಯುವ ನೀರಿನ ಅಭಾವದಿಂದ ತೊಂದರೆಗಳಾಗುವ ಸಾಧ್ಯತೆ ಇರುತ್ತದೆ. ಬೇಸಿಗೆಯಲ್ಲಿ ಉಷ್ಣಾಂಶ ಹೆಚ್ಚಾಗಿದ್ದಾಗ ಪಕ್ಷಿಗಳಿಗೆ ಹೆಚ್ಚಿನ ನೀರಿನ ಅಗತ್ಯವಿದ್ದು ಪಕ್ಷಿಗಳನ್ನು ಬಿಸಿಲಿನ ಶಾಖದ ಹೊಡೆತದಿಂದ ರಕ್ಷಿಸಲು ಅವುಗಳಿಗೆ ಕುಡಿಯುವ ನೀರು ಒದಗಿಸುವುದು ಅತ್ಯವಶ್ಯಕವಾಗಿರುತ್ತದೆ.
ಈ ಹಿನ್ನಲೆಯಲ್ಲಿ ಪಕ್ಷಿ ಸಂಕುಲದ ಹಿತದೃಷ್ಟಿಯಿಂದ ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿ ಕಟ್ಟಡಗಳ ಮೇಲೆ ನೆರಳಿನ ಆಶ್ರಯ ಇರುವಲ್ಲಿ ಪಕ್ಷಿಗಳಿಗೆ ನೀರು ಕುಡಿಯಲು ಅನುಕೂಲವಾಗುವಂತಹ ಮಡಿಕೆ, ಪಾತ್ರೆ, ಟಬ್ ಗಳಲ್ಲಿ ಸಾಕಷ್ಟು ನೀರು ತುಂಬಿಸಿ ನೀರುಣಿಸುವ ಪರಿಸರ ಸ್ನೇಹಿ ಕಾರ್ಯವನ್ನು ರೂಪಿಸಿ. ಅಲ್ಲದೇ ಮಡಿಕೆ, ಪಾತ್ರೆ, ಟಬ್ ಗಳಲ್ಲಿ ನಿಯಮಿತವಾಗಿ ನೀರು ಬದಲಾಯಿಸಿಕೊಂಡು, ಸೊಳ್ಳೆಗಳು ನಿಲ್ಲದಂತೆ ಮುಂಜಾಗೃತಾ ಕ್ರಮವಹಿಸಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಎನ್. ಶಿವಶಂಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…