ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರಾಗಿದ್ದ ಇಬ್ಬರು ಯುವತಿಯರು ಮೃತಪಟ್ಟಿರುವ ದುರ್ಘಟನೆ ನಡೆದಿದೆ.

ಕಂಟನಕುಂಟೆ ಗ್ರಾಮದ ನಿವಾಸಿ ಅಶ್ವಿನಿ (31) ಹಾಗೂ ಅರುವನಹಳ್ಳಿ ನಿವಾಸಿ ಸಹನಾ (22) ಮೃತ ದುರ್ದೈವಿಗಳು. ಅಶ್ವಿನಿ ಅಪಘಾತ ನಡೆದ ಸ್ಥಳದಲ್ಲೇ ಮೃತಪಟ್ಟರೆ, ಗಂಭೀರವಾಗಿ ಗಾಯಗೊಂಡಿದ್ದ ಸಹನಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಹ ಮೃತಪಟ್ಟಿದ್ದಾರೆ.

ಇಂದು ಬೆಳಗ್ಗೆ ಸುಮಾರು 8.30ರ ವೇಳೆಗೆ ಇಬ್ಬರೂ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕಾರ್ಖಾನೆಯೊಂದಕ್ಕೆ ಕೆಲಸಕ್ಕೆ ತೆರಳುತ್ತಿದ್ದ ವೇಳೆ, ಅವರು ಸಂಚರಿಸುತ್ತಿದ್ದ ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಇಬ್ಬರೂ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡು ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಿದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಇದೇ ವೇಳೆ, ಮೃತ ಯುವತಿಯರ ಕುಟುಂಬಸ್ಥರು ಮಾನವೀಯತೆ ಮೆರೆದು ಇಬ್ಬರ ಕಣ್ಣುಗಳನ್ನು ಡಾ. ರಾಜ್‌ಕುಮಾರ್ ಐ ಬ್ಯಾಂಕ್, ನಾರಾಯಣ ನೇತ್ರಾಲಯಕ್ಕೆ ದಾನ ಮಾಡಿದ್ದಾರೆ.

ದುಃಖದ ನಡುವೆಯೂ ಕಣ್ಣುಗಳನ್ನು ದಾನದ ಮೂಲಕ ಮತ್ತೊಬ್ಬರ ಬದುಕಿಗೆ ಬೆಳಕು ನೀಡಿರುವ ಕುಟುಂಬಸ್ಥರ ನಡೆ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

Ramesh Babu

Journalist

Recent Posts

3.75 ಲಕ್ಷ ಪಡಿತರ ಚೀಟಿದಾರರ ಇ-ಕೆವೈಸಿ ಬಾಕಿ: ಇ-ಕೆವೈಸಿಗೆ ಅ.20ರ ಗಡುವು: ಗಡುವು ವಿಸ್ತರಣೆಯಿಂದ ಫಲಾನುಭವಿಗಳಿಗೆ ಕೊಂಚ ನಿರಾಳ

ಬೆಂಗಳೂರು ಗ್ರಾಮಾಂತರ: ಪಡಿತರ ಚೀಟಿದಾರರ ಇ-ಕೆವೈಸಿ ಪ್ರಕ್ರಿಯೆಗೆ ಸರ್ಕಾರ ಅ.20ರವರೆಗೆ ಗಡುವು ವಿಸ್ತರಿಸಿದ್ದರೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇದುವರೆಗೆ ಶೇ.26.65ರಷ್ಟು…

11 hours ago

ಹಿಂಬದಿಯಿಂದ ಬೈಕ್‌ಗೆ ಕಾರು ಡಿಕ್ಕಿ: ದಂಪತಿ ಸಾವು

ದೊಡ್ಡಬಳ್ಳಾಪುರ: ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ದಂಪತಿ ಮೃತಪಟ್ಟಿರುವ ದಾರುಣ ಘಟನೆ ದೊಡ್ಡಬಳ್ಳಾಪುರ ತಾಲೂಕಿನ…

21 hours ago

ಬಿಗ್ ಬಾಸ್ ಮತ್ತು ಏಷ್ಯನ್ ಗೇಮ್ಸ್……

ಜಪಾನಿನ ಐಚಿ - ನಾಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಮತ್ತು ಭಾರತದ ವಿವಿಧ ಭಾಷೆಯ ಟಿವಿ ಚಾನಲ್ ಗಳಲ್ಲಿ ಪ್ರಸಾರವಾಗುತ್ತಿರುವ…

22 hours ago

ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ- ಆರ್.ವಿ. ಮಹೇಶ್

ದೊಡ್ಡಬಳ್ಳಾಪುರ: ಬರಗಾಲದ ಸಂದರ್ಭದಲ್ಲಿ ಜಲಮೂಲಗಳ ಸಂರಕ್ಷಣೆ ಹಾಗೂ ಕೆರೆಗಳ ಪುನಶ್ಚೇತನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೈಗೊಳ್ಳುತ್ತಿರುವ ಕೆರೆ…

1 day ago

ಹಾಸ್ಟೆಲ್‌ನಲ್ಲಿ ನೇಣಿಗೆ ಶರಣಾದ 18ರ ಹರೆಯದ ವಿದ್ಯಾರ್ಥಿ

ದೇವನಹಳ್ಳಿ: ಹಾಸ್ಟೆಲ್ ಕೊಠಡಿಯಲ್ಲಿ ಡಿಪ್ಲೋಮಾ ವಿದ್ಯಾರ್ಥಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಚನ್ನರಾಯಪಟ್ಟಣ ಗ್ರಾಮದಲ್ಲಿರುವ ಸರ್ಕಾರಿ ಉಪಕರಣಾಗಾರ…

1 day ago

ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ತೇಜಸ್ವಿನಿ.ಸಿ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ತೇಜಸ್ವಿನಿ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢಶಾಲಾ…

1 day ago