ಬೈಕ್ ಕಳ್ಳತನ ಮಾಡೋದ್ರಲ್ಲಿ ಸೆಂಚುರಿ ಬಾರಿಸಿದ ಖದೀಮ. ಮೂರು ವರ್ಷದಲ್ಲಿ ನೂರು ಬೈಕ್ ಕಳ್ಳತನ ಮಾಡಿದ ಸೆಂಚುರಿ ಸ್ಟಾರ್ ಕಳ್ಳನ ಆಂಧ್ರದ ಬಂಗಾರುಪಾಳ್ಯಂನ ನಿವಾಸಿ ಪ್ರಸಾದ್ ಬಾಬು ಎಂಬಾತನನ್ನು ಕೆ.ಆರ್ ಪುರಂ ಪೊಲೀಸರು ಬಂಧಿಸಿದ್ದಾರೆ.
ದುಬಾರಿ ಬೆಲೆಯ ಬೈಕ್ ಗಳನ್ನೆ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ. ಡೈಲಿ ಸಂಜೆ ಬಸ್ ನಲ್ಲಿ ಬೆಂಗಳೂರಿಗೆ ಬರುತ್ತಿದ್ದ ಆರೋಪಿ, ಕೆ.ಆರ್ ಪುರಂ, ಟಿನ್ ಫ್ಯಾಕ್ಟರಿ, ಮಹದೇವಪುರ ಜನವಸತಿ ಪ್ರದೇಶಗಳಲ್ಲಿ ಮನೆ ಮುಂದೆ ನಿಲ್ಲಿಸಿದ ಬೈಕ್ ಗಳ ಹ್ಯಾಂಡಲ್ ಲಾಕ್ ಮುರಿದು ಕಳ್ಳತನ ಮಾಡಲಾಗುತ್ತಿತ್ತು. ಬಂದ ದಿನವೇ ಬೈಕ್ ಕದ್ದು, ಅದೇ ಬೈಕ್ ನಲ್ಲಿ ಊರಿಗೆ ಎಸ್ಕೇಪ್ ಆಗುತ್ತಿದ್ದನಂತೆ.
ಕದ್ದ ಬೈಕ್ ಗಳನ್ನ 15-20 ಸಾವಿರಕ್ಕೆ ಆಂಧ್ರದಲ್ಲಿ ಮಾರಾಟ ಮಾಡುತ್ತಿದ್ದನಂತೆ. ಬಂದ ಹಣದಲ್ಲಿ ಮೋಜು ಮಸ್ತಿ ಮಾಡ್ತಿದ್ದ ಆರೋಪಿ. ಕೆ ಆರ್ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 25 ಬೈಕ್ ಕದ್ದಿದ್ದ ಆರೋಪಿ. ಆರೋಪಿ ಬಳಿ 20 ರಾಯಲ್ ಎನ್ಫೀಲ್ಡ್ ಬೈಕ್, 30 ಫಲ್ಸರ್ ಬೈಕ್, 40 ಆಕ್ಸಿಸ್ ಹಾಗೂ ಇತರೆ ವಾಹನಗಳು ವಶಕ್ಕೆ ಪಡೆಯಲಾಗಿದೆ. ಕೆ ಆರ್ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೊಡ್ಡಬಳ್ಳಾಪುರ ತಾಯಿ-ಮಗು ಆಸ್ಪತ್ರೆಯಲ್ಲಿ ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗದೆ 9 ತಿಂಗಳ ತುಂಬು ಗರ್ಭಿಣಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಘಟನೆ ಇಂದು…
ಎರಡು ಮುಖಗಳ, ವಿವಿಧ ಆಯಾಮಗಳ ಒಂದು ವಿಮರ್ಶೆ. ಭಾರತದ ಸಂವಿಧಾನ ಪ್ರತಿಪಾದಿಸುವ ಆಶಯಗಳ ಹಿನ್ನೆಲೆಯಲ್ಲಿ....... ಭಾರತದ ಸಂವಿಧಾನ ಮತ್ತು ಅದರ…
ದೊಡ್ಡಬಳ್ಳಾಪುರ: ಕಂದಾಯ ಇಲಾಖೆಯು ಭೂ ಸುರಕ್ಷಾ ಮಹತ್ವಾಕಾಂಕ್ಷಿ ಯೋಜನೆಯಡಿಯಲ್ಲಿ ತಾಲ್ಲೂಕು ಕಚೇರಿ, ಎ.ಸಿ ಕಚೇರಿ ಮತ್ತು ಡಿ.ಸಿ ಕಚೇರಿಗಳಲ್ಲಿರುವ ಪ್ರಮುಖ…
ದೊಡ್ಡಬಳ್ಳಾಪುರದ ಹಲವು ಭಾಗಗಳಲ್ಲಿ ಕೆಲವು ಕಾರ್ಖಾನೆಗಳು ಕಲುಷಿತ ಕೆಮಿಕಲ್ ತ್ಯಾಜ್ಯ, ಇನ್ನಿತರ ತ್ಯಾಜ್ಯವನ್ನು ಕೆರೆಗಳಿಗೆ, ಅರಣ್ಯ ಪ್ರದೇಶದಲ್ಲಿ ಸುರಿಯುತ್ತಿದ್ದಾರೆ. ಇದರಿಂದ…
ಕೂಸು ಇದ್ದ ಮನಿಗ ಬೀಸಣಿಕೆ ಯಾತಕ ? ಕೂಸು ಕಂದಯ್ಯ ಒಳ ಹೊರಗ ಆಡಿದರ ಬೀಸಣಿಕೆ ಗಾಳಿ ಸುಳಿದಾವ. ನಮ್ಮ…
ದೊಡ್ಡಬಳ್ಳಾಪುರ ತಾಲೂಕಿಗೆ ಮಂಜೂರಾಗಿದ್ದ ಜಿಲ್ಲಾಸ್ಪತ್ರೆಯನ್ನು ದೇವನಹಳ್ಳಿಗೆ ವರ್ಗಾವಣೆ ಮಾಡಲಾಗಿದೆ ಎಂಬ ಸುಳ್ಳು ಮಾಹಿತಿ ತಾಲೂಕಿನ ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ಇದಕ್ಕೆ…