ತುಮಕೂರು ನಗರ ಹಾಗೂ ರಾಜ್ಯದ ವಿವಿಧೆಡೆ ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿರುವ ಪೊಲೀಸರು, ಒಟ್ಟು 11.23 ಲಕ್ಷ ರೂ. ಮೌಲ್ಯದ 30 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.
ಬೆಂಗಳೂರು ವೈಟ್‌ಫೀಲ್ಡ್ ನಿವಾಸಿ ಹಾಗೂ ಆಂಧ್ರಪ್ರದೇಶದ ಅನಂತಪುರ ಜಿಲ್ಲೆ ದಾಸರಪಲ್ಲಿಯ ಕುಖ್ಯಾತ ಕಳ್ಳ ಚಿತ್ತಪ್ಪಗಾರಿ ಆನಂದ್ ಎಂಬಾತನನ್ನು ಬಂಧಿಸಲಾಗಿದೆ.
ಏಪ್ರಿಲ್ 17ರಂದು ತುಮಕೂರು ನಗರದ ರೈಲು ನಿಲ್ದಾಣ ರಸ್ತೆಯಲ್ಲಿ ಸುಮುಖ ಭಾರದ್ವಾಜ್ ಎಂಬುವರು ನಿಲ್ಲಿಸಿದ್ದ ಹೊಂಡ ಡಿಯೋ ದ್ವಿಚಕ್ರ ವಾಹನವನ್ನು ಕಳವು ಮಾಡಲಾಗಿತ್ತು. ಈ ಸಂಬಂಧ ಹೊಸ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ತಿಲಕ್ ಪಾರ್ಕ್ ಠಾಣೆ ಇನ್‌ಸ್ಪೆಕ್ಟರ್ ಪುರುಷೋತ್ತಮ್, ಹೊಸ ಬಡಾವಣೆ ಠಾಣೆ ಸಬ್‌ಇನ್‌ಸ್ಪೆಕ್ಟರ್‌ಗಳಾದ ಜಿ.ಚೇತನ್ ಕುಮಾರ್, ಮಂಗಳಮ್ಮ, ಎಎಸ್‌ಐ ಸೈಯದ್ ಮುಕ್ತಿಯಾರ್, ಸಿಬ್ಬಂದಿ ಕೆ.ಟಿ.ನಾರಾಯಣ, ನೀಲಕಂಠಯ್ಯ, ಕುಮಾರಸ್ವಾಮಿ, ಟಿ.ಎಚ್.ಮಂಜುನಾಥ, ಸುಚಿತ್ರಾ ಪಾಲೇಕರ್, ಕೆ.ಸಿ.ಚೇತನ, ಮಂಜಪ್ಪ ಮಸಾಲವಾಡ, ಸುನಿಲ್ ಕುಮಾರ್, ಈಶ್ವರ ನೇತೃತ್ವದಲ್ಲಿ ತನಿಖಾ ತಂಡ ರಚಿಸಲಾಗಿತ್ತು.
ತನಿಖಾ ತಂಡ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದು, ಸದ್ಯ ಕಳ್ಳನನ್ನು ಬಂಧಿಸಿ, ರಾಜ್ಯದ ವಿವಿಧೆಡೆಗಳಲ್ಲಿ ಕಳವು ಮಾಡಿದ್ದ 30 ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ.
ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…
ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…
ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…
ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್ನಲ್ಲಿ ಜನವರಿ 24…
ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…
ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…