ಹಾಡಹಗಲೇ ಬೈಕ್ ಗಳನ್ನು ಕದ್ದು ಪರಾರಿಯಾಗುತ್ತಿದ್ದ ಅಂತರ ಜಿಲ್ಲೆಯ ಬೈಕ್ ಕಳ್ಳನನ್ನು ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದ ಹೌಸಿಂಗ್ ಕಾಲೋನಿಯ ನಿವಾಸಿ ಪಿ.ಕೆ.ಭಾಸ್ಕರ್(48) ಬಂಧಿತ ಆರೋಪಿ.
ಆರೋಪಿ ಪಿ.ಕೆ.ಭಾಸ್ಕರ್ ಚಾಲಕನಾಗಿದ್ದು, ಮೇ ತಿಂಗಳ 21ರಂದು ನಗರದ ಕೃಷ್ಣಮೂರ್ತಿ ಎಂಬುವರು ತಮ್ಮ ಬೈಕ್ ನ್ನು ನಗರಸಭೆ ಆವರಣದಲ್ಲಿ ನಿಲ್ಲಿಸಿ ಕಚೇರಿ ಒಳಗೆ ಹೋಗಿದ್ದರು. ಬರುವಷ್ಟರಲ್ಲಿ ಕಳ್ಳತನ ಮಾಡಲಾಗಿತ್ತು. ಈ ಸಂಬಂಧ ಚಿಕ್ಕಬಳ್ಳಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಬಳಿಕ ಬೈಕ್ ಕಳ್ಳನ ಪತ್ತೆಗೆ ಎಸ್ಪಿ ಕುಶಲ್ ಚೌಕೈ ಎಎಸ್ಪಿ ಬಿ.ಜಗನ್ನಾಥ್ ರೈ, ಡಿವೈಎಸ್ಪಿ ಎಸ್.ಶಿವಕುಮಾರ್ ಮಾರ್ಗದರ್ಶನದಲ್ಲಿ ವೃತ್ತ ನಿರೀಕ್ಷಕ ಮಂಜುನಾಥ.ಎಂ, ಪಿಎಸ್‌ಐ ಅಮರ್ ಎಸ್.ಎಂ., ಪಿಎಸ್‌ಐ ರತ್ನಾಬಾಯಿ, ಸಿಬ್ಬಂದಿ ಲೋಕೇಶ್, ಫಕೀರಪ್ಪ ಗೊಂದಿ, ಮಧುಸೂದನ್, ಲಕ್ಷ್ಮಣ, ಆಯುಬ್ ಮುಲಾ, ನರೇಂದ್ರ ಕುಮಾರ್, ಜಿಲ್ಲಾ ಪೊಲೀಸ್ ಕಚೇರಿ ತಾಂತ್ರಿಕ ಸಿಬ್ಬಂದಿ ರವೀಂದ್ರ, ಮುನಿಕೃಷ್ಣ ತಂಡವು ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದೆ.
ಆರೋಪಿ ವಿರುದ್ದ ತುಮಕೂರು, ದೇವನಹಳ್ಳಿ, ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ.
ಬಂಧಿತನಿಂದ ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು 7,40,000 ರೂ.ನ ವಿವಿಧ ಕಂಪನಿಯ 18 ಬೈಕ್ ಗಳನ್ನು ವಶಕ್ಕೆ ಪಡೆದಿದ್ದಾರೆ.
ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…
ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…
ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…
ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…
ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…