ಬೈಕ್ ಕಳ್ಳನ ಸೆರೆ: ಬಂಧಿತನಿಂದ ಸುಮಾರು 7.40 ಲಕ್ಷ ರೂ.ಗಳ 18 ಬೈಕ್ ವಶ

ಹಾಡಹಗಲೇ ಬೈಕ್ ಗಳನ್ನು ಕದ್ದು ಪರಾರಿಯಾಗುತ್ತಿದ್ದ ಅಂತರ ಜಿಲ್ಲೆಯ ಬೈಕ್ ಕಳ್ಳನನ್ನು ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದ ಹೌಸಿಂಗ್ ಕಾಲೋನಿಯ ನಿವಾಸಿ ಪಿ.ಕೆ.ಭಾಸ್ಕರ್(48) ಬಂಧಿತ ಆರೋಪಿ.

ಆರೋಪಿ ಪಿ.ಕೆ.ಭಾಸ್ಕರ್ ಚಾಲಕನಾಗಿದ್ದು, ಮೇ ತಿಂಗಳ 21ರಂದು ನಗರದ ಕೃಷ್ಣಮೂರ್ತಿ ಎಂಬುವರು ತಮ್ಮ ಬೈಕ್ ನ್ನು ನಗರಸಭೆ ಆವರಣದಲ್ಲಿ ನಿಲ್ಲಿಸಿ ಕಚೇರಿ ಒಳಗೆ ಹೋಗಿದ್ದರು. ಬರುವಷ್ಟರಲ್ಲಿ ಕಳ್ಳತನ ಮಾಡಲಾಗಿತ್ತು. ಈ ಸಂಬಂಧ ಚಿಕ್ಕಬಳ್ಳಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಬಳಿಕ ಬೈಕ್ ಕಳ್ಳನ ಪತ್ತೆಗೆ ಎಸ್ಪಿ ಕುಶಲ್ ಚೌಕೈ ಎಎಸ್ಪಿ ಬಿ.ಜಗನ್ನಾಥ್ ರೈ, ಡಿವೈಎಸ್ಪಿ ಎಸ್.ಶಿವಕುಮಾರ್ ಮಾರ್ಗದರ್ಶನದಲ್ಲಿ ವೃತ್ತ ನಿರೀಕ್ಷಕ ಮಂಜುನಾಥ.ಎಂ, ಪಿಎಸ್‌ಐ ಅಮರ್ ಎಸ್.ಎಂ., ಪಿಎಸ್‌ಐ ರತ್ನಾಬಾಯಿ, ಸಿಬ್ಬಂದಿ ಲೋಕೇಶ್, ಫಕೀರಪ್ಪ ಗೊಂದಿ, ಮಧುಸೂದನ್, ಲಕ್ಷ್ಮಣ, ಆಯುಬ್ ಮುಲಾ, ನರೇಂದ್ರ ಕುಮಾರ್, ಜಿಲ್ಲಾ ಪೊಲೀಸ್ ಕಚೇರಿ ತಾಂತ್ರಿಕ ಸಿಬ್ಬಂದಿ ರವೀಂದ್ರ, ಮುನಿಕೃಷ್ಣ ತಂಡವು ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದೆ.

ಆರೋಪಿ ವಿರುದ್ದ ತುಮಕೂರು, ದೇವನಹಳ್ಳಿ, ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ.

ಬಂಧಿತನಿಂದ ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು 7,40,000 ರೂ.ನ ವಿವಿಧ ಕಂಪನಿಯ 18 ಬೈಕ್ ಗಳನ್ನು ವಶಕ್ಕೆ ಪಡೆದಿದ್ದಾರೆ.

Ramesh Babu

Journalist

Recent Posts

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

5 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

7 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

9 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

9 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

11 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

16 hours ago