
ಬೈಕ್ ಮತ್ತು ಕಾರಿನ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ರಾತ್ರಿ ದೊಡ್ಡಬಳ್ಳಾಪುರ ತಾಲೂಕಿನ ತಪಸೀಹಳ್ಳಿ ಗೇಟ್ ಬಳಿ ನಡೆದಿದೆ.
ಅಪಘಾತದಲ್ಲಿ ಬೈಕ್ ಸವಾರ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯರು ಹಾಗೂ ಸಾರ್ವಜನಿಕರ ಸಹಾಯದಿಂದ ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಸಲಾಗಿದೆ…