ಬೈಕ್‌–ಕ್ಯಾಂಟರ್ ನಡುವೆ ಭೀಕರ ಅಪಘಾತ: ಓರ್ವ ಸಾವು, ಇಬ್ಬರಿಗೆ ಗಾಯ

ದೊಡ್ಡಬಳ್ಳಾಪುರ: ತ್ರಿಬಲ್‌ ರೈಡಿಂಗ್‌ನಲ್ಲಿ ತೆರಳುತ್ತಿದ್ದ ಬೈಕ್‌ ಹಾಗೂ ಹಾಲಿನ ಕ್ಯಾಂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಮಧುರೆ ಹೋಬಳಿಯ 11ನೇ ಮೈಲಿ ಬಳಿ ನಡೆದಿದೆ.

ಮೃತ ಯುವಕನನ್ನು ನೆಲಮಂಗಲದ ಚಿಕ್ಕಪುಟ್ಟಯ್ಯನಪಾಳ್ಯದ ತುರುಣ್ (18) ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ವರ್ಷಿತ್ (25) ಹಾಗೂ ಮಧುಸೂದನ್ (22) ಎಂದು ತಿಳಿದುಬಂದಿದೆ.

ಒಂದೇ ಬೈಕ್‌ನಲ್ಲಿ ಮೂವರು ಯುವಕರು ತ್ರಿಬಲ್ ರೈಡಿಂಗ್ ಮಾಡಿಕೊಂಡು ಇಶಾ ಫೌಂಡೇಶನ್‌ಗೆ ತೆರಳಿ, ಅಲ್ಲಿಂದ ನೆಲಮಂಗಲದ ಕಡೆಗೆ ವಾಪಸ್ಸಾಗುತ್ತಿದ್ದರು. ಈ ವೇಳೆ 11ನೇ ಮೈಲಿ ಬಳಿ ಬೈಕ್‌ಗೆ ಕ್ಯಾಂಟರ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ತುರುಣ್ ಸ್ಥಳದಲ್ಲೇ ಮೃತಪಟ್ಟಿದ್ದು, ವರ್ಷಿತ್ ಹಾಗೂ ಮಧುಸೂದನ್ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮೃತರು ಹಾಗೂ ಗಾಯಾಳುಗಳು ನೆಲಮಂಗಲ ಮೂಲದವರು ಎಂದು ತಿಳಿದುಬಂದಿದೆ. ಅಪಘಾತದ ಮಾಹಿತಿ ತಿಳಿದು ಸ್ಥಳಕ್ಕೆ ದೊಡ್ಡಬೆಳವಂಗಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆಗೆ ನಿಖರ ಕಾರಣ ಹಾಗೂ ಮೃತರ ಗುರುತು ಸೇರಿದಂತೆ ಹೆಚ್ಚಿನ ವಿವರಗಳಿಗಾಗಿ ತನಿಖೆ ಮುಂದುವರಿಸಿದ್ದಾರೆ.

ಘಟನೆ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Ramesh Babu

Journalist

Recent Posts

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

42 minutes ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

2 hours ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

3 hours ago

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

5 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

8 hours ago

ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯನವರದ್ದು ಕುಮಾರಸ್ವಾಮಿ ತರಹದ ಚರಿತ್ರೆಯಲ್ಲ: ಎಚ್.ಡಿ.ಕೆ ವಿರುದ್ಧ ಸಚಿವ ಚಲುವರಾಯಸ್ವಾಮಿ ತೀವ್ರ ವಾಗ್ದಾಳಿ

ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…

20 hours ago