ಬೈಕ್ ಗೆ ಕಾರು ಡಿಕ್ಕಿ – ಇಬ್ಬರು ಬೈಕ್ ಸವಾರರು ದಾರುಣ ಸಾವು

ಗುಡಿಬಂಡೆ: ದ್ವಿಚಕ್ರ ವಾಹನ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸವಾರರು ಮೃತಪಟ್ಟಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 44ರ ತಟ್ಟಹಳ್ಳಿ ಕ್ರಾಸ್ ಬಳಿ ಈ ಅಪಘಾತ ನಡೆದಿದೆ. ಯರ್ರಲಕ್ಕೇನಹಳ್ಳಿ ಗ್ರಾಮದ ಶಿವಪ್ಪ (35) ಹಾಗೂ ಅನಿಲ್ ಕುಮಾರ್(26) ಮೃತಪಟ್ಟಿರುತ್ತಾರೆ.

ಟಮೋಟ ಗಿಡಗಳಿಗೆ ಔಷಧಿ ತರಲು ತಮ್ಮ ಗ್ರಾಮದಿಂದ ಬೈಕ್ ನಲ್ಲಿ ಬಾಗೇಪಲ್ಲಿ ಕಡೆಗೆ ಹೋಗುತ್ತಿದ್ದಾಗ ಬೈಕ್ ನ ಹಿಂಬದಿಗೆ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಒಬ್ಬರು ರಸ್ತೆ ಪಕ್ಕದಲ್ಲಿ ಬಿದ್ದರೆ, ಮತ್ತೊಬ್ಬರು ಸುಮಾರು 100ಮೀ ದೂರದಲ್ಲಿ ಬಿದ್ದಿದ್ದಾರೆ, ಇಬ್ಬರು ಬೈಕ್ ಸವಾರರಿಗೆ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಕಾರು ಚಾಲಕ ಕಾರನ್ನು ಬಿಟ್ಟು ಪರಾರಿಯಾಗಿದ್ದಾನೆ.

ಅಪಘಾತ ಸ್ಥಳಕ್ಕೆ ಗುಡಿಬಂಡೆ ಪೊಲೀಸ್ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತದೇಹಗಳ ಮರಣೋತ್ತರ ಪರೀಕ್ಷೆ ಗುಡಿಬಂಡೆ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ.

Ramesh Babu

Journalist

Recent Posts

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

7 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

8 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

11 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

11 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

13 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

18 hours ago