
ಬೈಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ ಇಂದು ಬೆಳಗ್ಗೆ ನಡೆದಿದೆ….
ಹೆಸರಘಟ್ಟ ಮೂಲದ ಕನ್ನಯ್ಯ(62) ಮೃತ ದುರ್ದೈವಿ…

ದಾಬಸ್ ಪೇಟೆ-ಹೊಸಕೋಟೆ ಹೆದ್ದಾರಿಯಲ್ಲಿ ದಾಬಸ್ ಪೇಟೆ ಕಡೆಯಿಂದ ವೇಗವಾಗಿ ಬರುತ್ತಿದ್ದ ಕಾರು ಮೆಣಸಿ ಗೇಟ್ ಬಳಿ ಯೂಟರ್ನ್ ತೆಗೆದುಕೊಳ್ಳುತ್ತಿದ್ದ ಆಕ್ಟಿವ್ ಹೋಂಡಾ ಬೈಕ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ…

ಕಾರಿನ ಮುಂಭಾಗ, ಬೈಕ್ ಸಂಪೂರ್ಣ ಜಖಂಗೊಂಡಿದೆ….
ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ….