
ಬೈಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಗೆ ಗಂಭೀರ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಬಳಿ ನಡೆದಿದೆ..
ಘಟನೆಯಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು, ಕೂಡಲೇ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಬೈಕ್ ಸಂಪೂರ್ಣ ಜಖಂಗೊಂಡಿದೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ..
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ..