ಬೈಕ್ ಜಾಥಾ ಮೂಲಕ ಮತದಾನ ಜಾಗೃತಿ

ಇಂದು ದೊಡ್ಡಬಳ್ಳಾಪುರ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ನಡೆದ ಬೈಕ್ ಜಾಥಾ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ. ಅನುರಾಧ ಅವರು ಚಾಲನೆ ನೀಡಿದರು.

ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ರ ಸಂಬಂಧ ಅರಳುಮಲ್ಲಿಗೆ ಗ್ರಾಮ ಫಂಚಾಯಿತಿಯಿಂದ ದರ್ಗಾ ಜೋಗಿಹಳ್ಳಿ, ನಗರಸಭೆ, ಕೊಡಿಗೆಹಳ್ಳಿ ಕಂಟನಕುಂಟೆ ಗ್ರಾಮ ಪಂಚಾಯಿತಿಯವರೆಗೆ ಬೈಕ್ ಜಾಥಾ ಮೂಲಕ ಮತದಾನದ ಕುರಿತು ಅರಿವು ಮತ್ತು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಈ ವೇಳೆ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಸಮಿತಿ ಅಧ್ಯಕ್ಷರು ಮತದಾನದ ಪ್ರತಿಜ್ಞಾವಿಧಿ ಬೋಧಿಸುವ ಮೂಲಕ ಮತದಾರರಲ್ಲಿ ಜಾಗೃತಿ ಮೂಡಿಸಿದರು.

ಈ ಜಾತ ಕಾರ್ಯಕ್ರಮದಲ್ಲಿ CAO ಶ್ರೀನಿವಾಸ್, CPO ರಾಮಕೃಷ್ಣಪ್ಪ. PD ವಿಟ್ಟಲ್ ಕಾವಳೆ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಮುನಿರಾಜು ಮತ್ತು ನಗರ ಸಭೆ ಕಮಿಷನರ್ ಪರಮೇಶ್, ಸಹಾಯಕ ನಿರ್ದೇಶಕ ಕುಮಾರ್ ಹಾಗೂ ತಾಲೂಕಿನ ಎಲ್ಲಾ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ನಗರಸಭೆ ಅಧಿಕಾರಿಗಳು ಮತ್ತು ಸಿಬ್ಬಂದಿ, ಪಟ್ಟಣ ಪಂಚಾಯತಿ ಸಿಬ್ಬಂದಿ, ಗ್ರಾಮ ಪಂಚಾಯತಿಯ ಸಿಬ್ಬಂದಿ, ತಾಲ್ಲೂಕು ಪಂಚಾಯಿತಿ ಸಿಬ್ಬಂದಿ ಸೇರಿ 500 ಹೆಚ್ಚು ಬೈಕ್ ಗಳಲ್ಲಿ ಯಶಸ್ವಿಯಾಗಿ ಜಾಥಾ ಹಮ್ಮಿಕೊಳ್ಳಲಾಯಿತು.

Leave a Reply

Your email address will not be published. Required fields are marked *