ಬೈಕ್ ಜಾಥಾ ಮೂಲಕ ಸಂವಿಧಾನ ಜಾಗೃತಿ

ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ಸಾರ್ವಜನಿಕರಿಗೆ ಸಂವಿಧಾನ ಜಾಗೃತಿ ಮೂಡಿಸಿಲು ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯಲ್ಲಿ ಬೈಕ್ ರ್ಯಾಲಿ ಗೆ ಚಾಲನೆ ನೀಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಸಮಾಜಕಲ್ಯಾಣ ಇಲಾಖೆ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯಲ್ಲಿ ಇಂದು ನಡೆದ ಸಂವಿಧಾನ ಜಾಗೃತಿ ಜಾಥದಲ್ಲಿ ಪಾಲ್ಗೊಂಡು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮಾತನಾಡಿ, ನಾಳೆಯಿಂದ ಸಂವಿಧಾನ ಜಾಗೃತಿ ಜಾಥಾ ನೆಲಮಂಗಲದಲ್ಲಿ ಸಂಚರಿಸಲಿದ್ದು, ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಜಾಥಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಹೇಳಿದರು.

ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರು, ಮುಖಂಡರು, ವಿವಿಧ ಸಂಘಟನೆಗಳು ಸಂವಿಧಾನ ಜಾಗೃತಿ ಜಾಥಾ ರಥವನ್ನು ಅದ್ಧೂರಿಯಾಗಿ ಸ್ವಾಗತಿಸಿ, ಸಂವಿಧಾನ ರಥಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.

ವಿವಿಧ ಸಾಂಸ್ಕೃತಿಕ ಕಲಾತಂಡಗಳೊಂದಿಗೆ ಮಹಿಳೆಯರು ಕಳಶ ಹೊರುವ ಮೂಲಕ ಬರಮಾಡಿಕೊಂಡರು, ಸೈಕಲ್ ಜಾಥಾ, ಎತ್ತಿನ ಗಾಡಿ ಜಾಥಾ, ಬೈಕ್ ರ್ಯಾಲಿಯೊಂದಿಗೆ ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ಸಂವಿಧಾನ ಜಾಗೃತಿ ಜಾಥಾದಲ್ಲಿ ಭಾಗಿಯಾದರು.

ಈ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಎನ್ ಅನುರಾಧ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಟಿ.ಎಲ್.ಎಸ್ ಪ್ರೇಮ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಕವಿತಾ, ದೊಡ್ಡಬಳ್ಳಾಪುರ ತಹಶೀಲ್ದಾರ್ ವಿದ್ಯಾ ವಿಭಾ ರಾಥೋಡ್, ಕಾರ್ಯನಿರ್ವಾಹಕ ಅಧಿಕಾರಿ ಮುನಿರಾಜು, ದೊಡ್ಡಬಳ್ಳಾಪುರ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಾದ ಉಮಾಪತಿ, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಪಂಚಾಯಿತಿ ಅಭಿವೃದ್ಧಿ  ಅಧಿಕಾರಿ, ಆಯಾ ಗ್ರಾಮಪಂಚಾಯಿತಿ ವ್ಯಾಪ್ತಿಯ ಸದಸ್ಯರು, ಮುಖಂಡರು, ವಿವಿಧ ಸಂಘಟನೆಗಳು, ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *