ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ಸಾರ್ವಜನಿಕರಿಗೆ ಸಂವಿಧಾನ ಜಾಗೃತಿ ಮೂಡಿಸಿಲು ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯಲ್ಲಿ ಬೈಕ್ ರ್ಯಾಲಿ ಗೆ ಚಾಲನೆ ನೀಡಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಸಮಾಜಕಲ್ಯಾಣ ಇಲಾಖೆ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯಲ್ಲಿ ಇಂದು ನಡೆದ ಸಂವಿಧಾನ ಜಾಗೃತಿ ಜಾಥದಲ್ಲಿ ಪಾಲ್ಗೊಂಡು ಚಾಲನೆ ನೀಡಿದರು.
ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರು, ಮುಖಂಡರು, ವಿವಿಧ ಸಂಘಟನೆಗಳು ಸಂವಿಧಾನ ಜಾಗೃತಿ ಜಾಥಾ ರಥವನ್ನು ಅದ್ಧೂರಿಯಾಗಿ ಸ್ವಾಗತಿಸಿ, ಸಂವಿಧಾನ ರಥಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಎನ್ ಅನುರಾಧ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಟಿ.ಎಲ್.ಎಸ್ ಪ್ರೇಮ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಕವಿತಾ, ದೊಡ್ಡಬಳ್ಳಾಪುರ ತಹಶೀಲ್ದಾರ್ ವಿದ್ಯಾ ವಿಭಾ ರಾಥೋಡ್, ಕಾರ್ಯನಿರ್ವಾಹಕ ಅಧಿಕಾರಿ ಮುನಿರಾಜು, ದೊಡ್ಡಬಳ್ಳಾಪುರ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಾದ ಉಮಾಪತಿ, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಆಯಾ ಗ್ರಾಮಪಂಚಾಯಿತಿ ವ್ಯಾಪ್ತಿಯ ಸದಸ್ಯರು, ಮುಖಂಡರು, ವಿವಿಧ ಸಂಘಟನೆಗಳು, ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.
ರೈತರಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಬರ ಪರಿಹಾರದ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಡಿದ್ದ ಟೀಕೆಗೆ ಸಚಿವ…
ನಾಗಮಂಗಲ: ಕಾರ್ಮಿಕರಿಗಾಗಿಯೇ ಪ್ರತಿ ತಾಲೂಕಿನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಶಾಲೆ ತೆರೆಯಲು ಸರ್ಕಾರ ಮುಂದಾಗಿದೆ ಎಂದು ಜಿಲ್ಲಾ ಉಸ್ತುವಾರಿ…
ನಾಗಮಂಗಲ: ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ತಾಲೂಕಿನಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಬರೋಬ್ಬರಿ 691 ಪ್ರಕರಣಗಳಲ್ಲಿ ಕಾನೂನುಬಾಹಿರವಾಗಿ ಸಾಗುವಳಿ ಚೀಟಿ…
ದೊಡ್ಡಬಳ್ಳಾಪುರ: ಯುವಕರು ಮೊದಲು ತಂದೆ-ತಾಯಿಯನ್ನು ಗೌರವಿಸುವುದನ್ನು ಕಲಿಯಬೇಕು. ನಂತರ ಪಾಠ-ಪ್ರವಚನಗಳನ್ನು ಕಲಿಯಬೇಕು ಎಂದು ಹೈಕೋರ್ಟ್ ವಕೀಲರಾದ ಸುರೇಶ್ ಗೌಡ ಬಿ.ವಿದ್ಯಾರ್ಥಿಗಳಿಗೆ…
ಬೆಂಗಳೂರು: ಸೂಕ್ತ ದಾಖಲೆಗಳನ್ನು ಪರಿಶೀಲಿಸದೆ 10.50 ಕೋಟಿ ಸಾಲ ಮಂಜೂರು ಮಾಡಿ ಸೌಂದರ್ಯ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ ಆರ್ಥಿಕ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಮಾಕಳಿ ರೈಲ್ವೆ ನಿಲ್ದಾಣದ ಸಮೀಪ ಹಿಂದೂಪುರ–ಯಲಹಂಕ ಹೆದ್ದಾರಿಯಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್…