ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಆಯೋಜಿಸಲಾಗಿರುವ ಬೈಕ್ ರಿಪೇರಿ ಮತ್ತು ಸೇವೆ ಕುರಿತು 30 ದಿನಗಳ ಉಚಿತ ತರಬೇತಿಯನ್ನು ಆಗಸ್ಟ್ 21 ರಿಂದ ಹಮ್ಮಿಕೊಳ್ಳಲಾಗಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರಬೇಕು. ಅರ್ಜಿ ಸಲ್ಲಿಸಲು ಆಗಸ್ಟ್ 15 ಕೊನೆಯ ದಿನವಾಗಿದೆ.
ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು. ಜತೆಗೆ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.
ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ: 9380162042, 9740982585
ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…
ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…
ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಕಾಲಮಿತಿಯೊಳಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಸೌಲಭ್ಯಗಳು ತಲುಪುವಂತೆ ಕ್ರಮವಹಿಸಿ ಎಂದು ಅಧಿಕಾರಿಗಳಿಗೆ…
ಪೊಲೀಸ್ ಇಲಾಖೆಯಲ್ಲಿ 1000 ಸಬ್ ಇನ್ಸ್ಪೆಕ್ಟರ್ ಹಾಗೂ 8000 ಕಾನ್ಸ್ಟೇಬಲ್ ಗಳನ್ನು ಆದಷ್ಟು ಶೀಘ್ರ ನೇಮಕ ಮಾಡಲಾಗುವುದು ಎಂದು…
ಇಂದು ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ…
2025-26ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಫಲಿತಾಂಶ ಪ್ರಕಟವಾದ ದಿನವೇ National Academic Depository…