ಬೈಕ್ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರರಿಗೆ ಗಂಭೀರವಾಗಿ ಗಾಯಗಳಾಗಿರುವ ಘಟನೆ ಇಂದು ಬೆಳಗ್ಗೆ ತಾಲೂಕಿನ ಗುಂಡಮ್ಮಗೆರೆಗೆ ಹೋಗುವ ಮಾರ್ಗ ಮಧ್ಯದಲ್ಲಿರುವ ಗ್ರೀನ್ ವ್ಯಾಲಿ ಬಳಿ ನಡೆದಿದೆ.
ಯರ್ರಗುಂಟೆ ನಿವಾಸಿಗಳಾದ ಶಿವು, ಆನಂದ್ ಘಟನೆಯಲ್ಲಿ ಗಾಯಗೊಂಡವರು. ವಾಹನವನ್ನು ಹಿಂದಿಕ್ಕಲು ಹೋಗುವ ಬರದಲ್ಲಿ ಕಾರಿಗೆ ಡಿಕ್ಕಿ ಹೊಡೆದ ಬೈಕ್. ಡಿಕ್ಕಿ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಸ್ಥಳಕ್ಕೆ ಹೊಸಹಳ್ಳಿ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.