ಬೈಕ್ ಹಾಗೂ ಪ್ಯಾಸೆಂಜರ್ ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ತಾಲೂಕಿ ಕೋಡಿಹಳ್ಳಿಯ ಕರಿಯಪ್ಪ ದೇವಾಸ್ಥಾನ ಬಳಿ ನಡೆದಿದೆ.
ದೊಡ್ಡಬಳ್ಳಾಪುರದಿಂದ ಕೋಡಿಹಳ್ಳಿಗೆ ಹೋಗುತ್ತಿದ್ದ ಪ್ಯಾಸೆಂಜರ್ ಆಟೋಗೆ ಕೋಡಿಹಳ್ಳಿಯಿಂದ ದೊಡ್ಡಬಳ್ಳಾಪುರ ಟೌನ್ ಕಡೆ ಅತಿವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಡಿಕ್ಕಿ ರಭಸಕ್ಕೆ ಬೈಕ್ ಸವಾರ ಮನಮೋಹನ್ ಎಂಬ ವ್ಯಕ್ತಿಗೆ ತಲೆಗೆ ತೀವ್ರವಾಗಿ ಪೆಟ್ಟಾಗಿದೆ. ಕೂಡಲೇ ಸ್ಥಳೀಯರ ಸಹಕಾರದಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಾಯಗೊಂಡ ಬೈಕ್ ಸವಾರ ಮನಮೋಹನ್ ಬೆಂಗಳೂರು ಮೂಲದವನಾಗಿದ್ದು, ಕೋಡಿಹಳ್ಳಿಯ ಅಜ್ಜಿ ಮನೆಯಲ್ಲಿ ಕೆಲದಿನಗಳಿಂದ ವಾಸವಾಗಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…