ಬೈಕ್ ಹಾಗೂ ಬಿಎಂಟಿಸಿ ಬಸ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ನಗರದ ಹೊರವಲಯದ ರೈಲ್ವೇ ಸ್ಟೇಷನ್ ಬಳಿ ಇಂದು ಬೆಳಗ್ಗೆ ನಡೆದಿದೆ.
ಕೆಸ್ತೂರು ಗ್ರಾಮದ ನಟರಾಜ್ (50), ಸಾವನಪ್ಪಿರುವ ಬೈಕ್ ಸಾವಾರ.
ದೊಡ್ಡಬಳ್ಳಾಪುರದಿಂದ ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣಕ್ಕೆ ತೆರಳುತ್ತಿದ್ದ BMTC ಬಸ್ ಹಾಗೂ ರೈಲ್ವೇ ಸ್ಟೇಷನ್ ಕಡೆಯಿಂದ ದೊಡ್ಡಬಳ್ಳಾಪುರಕ್ಕೆ ಬರುತ್ತಿದ್ದ ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿದೆ.
ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.