ಚಿನ್ನದ ಒಡವೆಗಳನ್ನು ಅಡವಿಟ್ಟು ಹಣವನ್ನು ತೆಗೆದುಕೊಂಡು ಮನೆಗೆ ಹೋಗುವಾಗ ಹಿಂಬಾಲಿಸಿಕೊಂಡು ಬಂದು ಕ್ಷಣಾರ್ಧದಲ್ಲಿ 2 ಲಕ್ಷ 19 ಸಾವಿರ ರೂ. ಹಣವನ್ನು ಕದ್ದು ಕಳ್ಳರು ಎಸ್ಕೇಪ್ ಆಗಿರುವ ಘಟನೆ ನಗರದ ವಿದ್ಯಾನಿಧಿ ಕಾಲೇಜು ರಸ್ತೆಯಲ್ಲಿ ನಡೆದಿದೆ.
ಘಟನೆಯ ವಿವರ:
ತಾಲ್ಲೂಕಿನ ಕಾಮನಅಗ್ರಹಾರ ಗ್ರಾಮದ ಮುದ್ದೇಗೌಡ ಎಂಬುವರು ಸಾಲದ ಹಣವನ್ನು ವಾಪಸ್ ಮಾಡಲು ಮನೆಯಲ್ಲಿದ್ದ ಚಿನ್ನದ ಸರ ಸೇರಿದಂತೆ ವಿವಿಧ ಆಭರಣಗಳನ್ನು ನಗರದ ಡಿಕ್ರಾಸ್ ರಸ್ತೆಯಲ್ಲಿರುವ ಫೆಡರಲ್ ಬ್ಯಾಂಕಿನಲ್ಲಿ ಅಡವಿಟ್ಟು ಸುಮಾರು 2 ಲಕ್ಷ 19 ಸಾವಿರ ರೂ. ಪಡೆದಿದ್ದಾರೆ. ಈ ಹಣವನ್ನು ಮೊಪೆಡ್ ಬೈಕ್ ನ ಡಿಕ್ಕಿಯಲ್ಲಿಟ್ಟುಕೊಂಡಿದ್ದಾರೆ. ಊರಿಗೆ ತೆರಳುವ ಮಾರ್ಗದ ಮಧ್ಯೆ ಸಂಬಂಧಿಕರೊಂದಿಗೆ ಮಾತನಾಡಲು
ವಿದ್ಯಾನಿಧಿ ಕಾಲೇಜಿಗೆ ತೆರಳಿದ್ದಾರೆ. ನಂತರ ಕಾಲೇಜ್‌ನಿಂದ ಹೊರಬಂದು ದ್ವಿಚಕ್ರ ವಾಹನದ ಡಿಕ್ಕಿ ತೆರೆದಿರುವುದನ್ನ ಕಂಡ ಬಳಿಕ ಡಿಕ್ಕಿ ತೆರೆದಾಗ ಹಣ ಇಲ್ಲದಿರುವುದು ತಿಳಿದಿದೆ.
ಈ ಕುರಿತು ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಗೆ ದೂರು ನೀಡಿದ ಹಿನ್ನೆಲೆ ಸ್ಥಳಕ್ಕೆ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಕಾಲೇಜಿನ ಸಿಸಿಟಿವಿಯ ದೃಶ್ಯಾವಳಿಗಳನ್ನು ಪರಿಶೀಲನೆ ಮಾಡಿ ವಶಕ್ಕೆ ಪಡೆದಿದ್ದಾರೆ. ಬ್ಯಾಂಕಿನಲ್ಲಿ ಹಣ ಪಡೆದಿದನ್ನು ನೋಡಿರುವ ಕಳ್ಳರು ಬೈಕ್ ನ್ನು ಹಿಂಬಾಲಿಸಿಕೊಂಡು ಬಂದು ಹಣವನ್ನು ದೋಚಿರಬಹುದೆಂದು ಶಂಕೆ ವ್ಯಕ್ತವಾಗಿದೆ.
ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಬಂಧಿಸಿದೆ.
2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್ ಪೀಠವು 9 ಪೊಲೀಸ್ ಸಿಬ್ಬಂದಿಗೆ…
ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…
ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಛಲವಾದಿ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…
ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…