ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡತುಮಕೂರು ಗ್ರಾಪಂ ವ್ಯಾಪ್ತಿಯ ಬೈರಸಂದ್ರ ಗ್ರಾಮದಲ್ಲಿ ಅಕ್ರಮವಾಗಿ ನಿರ್ಮಾಣವಾಗಿರುವ ಹಂದಿ ಸಾಕಣೆ ಶೆಡ್ ನಿಂದಾಗಿ ಗ್ರಾಮಸ್ಥರಿಗೆ ತೊಂದರೆಗಳಾಗುತ್ತಿದ್ದು, ಕೂಡಲೇ ಶೆಡ್ ಮಾಲೀಕರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಿ, ಹಂದಿ ಶೆಡ್ ಸ್ಥಳಾಂತರಿಸಬೇಕೆಂದು ಗ್ರಾಮಸ್ಥರು ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ತಹಶೀಲ್ದಾರ್ ಮಲ್ಲಪ್ಪ ಕೆ.ಯರಗೋಳ ಅವರಿಗೆ ಮನವಿ ಸಲ್ಲಿಸಿದರು.
ಮನವಿ ಸಲ್ಲಿಸಿ ಮಾತನಾಡಿದ ಗ್ರಾಮದ ಮುಖಂಡರಾದ ಲಕ್ಷ್ಮೀಸಾಗರ್, ಮುನಿ ಓಬಳಪ್ಪ, ಸಿದ್ದರಾಜು, ಶ್ರೀಧರ್ ತಾಲೂಕಿನ ದೊಡ್ಡತುಮಕೂರು ಗ್ರಾಪಂ ವ್ಯಾಪ್ತಿಯ ಬೈರಸಂದ್ರ ಗ್ರಾಮದ ಪರಿಮಿತಿಯಲ್ಲಿ ಅಕ್ರಮವಾಗಿ ಯಾವುದೇ ಸಕ್ಷಮ ಪ್ರಾಧಿಕಾರ ಅಥವಾ ಸ್ಥಳೀಯ ಪ್ರಾಧಿಕಾರದಿಂದ ಅನುಮತಿ ಪಡೆಯದೆ, ಹಂದಿ ಸಾಕಣೆ ಶೆಡ್ ನಿರ್ಮಿಸಲಾಗಿದೆ ಎಂದು ಆರೋಪಿಸಿದಲ್ಲದೇ, ಈ ಶೆಡ್‌ನಿಂದ ಪ್ರತಿನಿತ್ಯ ದುರ್ವಾಸನೆ ಬರುತ್ತಿದ್ದು ಗ್ರಾಮದಲ್ಲಿ ವಾಸನೆ ಸೇರಿದಂತೆ ಅನೇಕ ರೋಗಗಳು ಹರಡುತ್ತಿವೆ. ಮಹಿಳೆಯರು, ಮಕ್ಕಳು ಹೆಚ್ಚಾಗಿ ತೊಂದರೆಗೀಡಾಗುತ್ತಿದ್ದಾರೆ. ಇದಲ್ಲದೇ ಹಂದಿ ಸಾಕಣೆ ಮಾಡಲು ದೊಡ್ಡಬಳ್ಳಾಪುರ ನಗರ ಮತ್ತು ಇತರ ಕಡೆಗಳಿಂದ ಕೋಳಿ ಮತ್ತು ನಗರದ ಹೋಟೆಲ್ ತ್ಯಾಜ್ಯ, ಪ್ಲಾಸ್ಟಿಕ್ ತ್ಯಾಜ್ಯ ತಂದು ಸುಡಲಾಗುತ್ತಿದೆ. ಅರ್ಕಾವತಿ ನದಿ ಪಾತ್ರದ ದೊಡ್ಡತುಮಕೂರು ಕೆರೆಗೆ ಶೆಡ್‌ನ ಕೊಳಚೆ ನೀರು ಬಿಡಲಾಗುತ್ತಿದೆ. ಅಕ್ರಮ ಹಂದಿ ಸಾಕಣೆ ಶೆಡ್ ಸ್ಥಳಾಂತರ ಹಾಗೂ ಕೆರೆ ಅಂಗಳಕ್ಕೆ ಕಲುಷಿತ ನೀರು ಸೇರುತ್ತಿದೆ. ಈ ಕುರಿತು ಈಗಾಗಲೇ ಹೋರಾಟ ನಡೆಯುತ್ತಿದ್ದು, ಗ್ರಾಪಂಗೆ ದೂರು ನೀಡಿದ್ದರೂ ಯಾವುದೇ ಪ್ರಯೋಜನವಿಲ್ಲವಾಗಿದೆ. ಆದ್ದರಿಂದ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಶೆಡ್ ಸ್ಥಳಾಂತರ ಮಾಡುವಂತೆ ಮನವಿ ಸಲ್ಲಿಸಲಾಗಿದೆ. ಈ ಬಗ್ಗೆ ಕ್ರಮ ಕೈಗೊಳ್ಳದಿದ್ದರೆ ತೀವ್ರ ಹೋರಾಟ ನಡೆಸಬೇಕಾಗುತ್ತದೆ ಎಂದರು.
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…
ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…
ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…
ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…
ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…
ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…