ಬೈರಸಂದ್ರದಲ್ಲಿ ಹಂದಿ ಶೆಡ್‌ ಸ್ಥಳಾಂತರಕ್ಕೆ ಒತ್ತಾಯ

ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡತುಮಕೂರು ಗ್ರಾಪಂ ವ್ಯಾಪ್ತಿಯ ಬೈರಸಂದ್ರ ಗ್ರಾಮದಲ್ಲಿ ಅಕ್ರಮವಾಗಿ ನಿರ್ಮಾಣವಾಗಿರುವ ಹಂದಿ ಸಾಕಣೆ ಶೆಡ್ ನಿಂದಾಗಿ ಗ್ರಾಮಸ್ಥರಿಗೆ ತೊಂದರೆಗಳಾಗುತ್ತಿದ್ದು, ಕೂಡಲೇ ಶೆಡ್ ಮಾಲೀಕರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಿ, ಹಂದಿ ಶೆಡ್ ಸ್ಥಳಾಂತರಿಸಬೇಕೆಂದು ಗ್ರಾಮಸ್ಥರು ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ತಹಶೀಲ್ದಾರ್ ಮಲ್ಲಪ್ಪ ಕೆ.ಯರಗೋಳ ಅವರಿಗೆ ಮನವಿ ಸಲ್ಲಿಸಿದರು.

ಮನವಿ ಸಲ್ಲಿಸಿ ಮಾತನಾಡಿದ ಗ್ರಾಮದ ಮುಖಂಡರಾದ ಲಕ್ಷ್ಮೀಸಾಗರ್, ಮುನಿ ಓಬಳಪ್ಪ, ಸಿದ್ದರಾಜು, ಶ್ರೀಧರ್ ತಾಲೂಕಿನ ದೊಡ್ಡತುಮಕೂರು ಗ್ರಾಪಂ ವ್ಯಾಪ್ತಿಯ ಬೈರಸಂದ್ರ ಗ್ರಾಮದ ಪರಿಮಿತಿಯಲ್ಲಿ ಅಕ್ರಮವಾಗಿ ಯಾವುದೇ ಸಕ್ಷಮ ಪ್ರಾಧಿಕಾರ ಅಥವಾ ಸ್ಥಳೀಯ ಪ್ರಾಧಿಕಾರದಿಂದ ಅನುಮತಿ ಪಡೆಯದೆ, ಹಂದಿ ಸಾಕಣೆ ಶೆಡ್ ನಿರ್ಮಿಸಲಾಗಿದೆ ಎಂದು ಆರೋಪಿಸಿದಲ್ಲದೇ, ಈ ಶೆಡ್‌ನಿಂದ ಪ್ರತಿನಿತ್ಯ ದುರ್ವಾಸನೆ ಬರುತ್ತಿದ್ದು ಗ್ರಾಮದಲ್ಲಿ ವಾಸನೆ ಸೇರಿದಂತೆ ಅನೇಕ ರೋಗಗಳು ಹರಡುತ್ತಿವೆ. ಮಹಿಳೆಯರು, ಮಕ್ಕಳು ಹೆಚ್ಚಾಗಿ ತೊಂದರೆಗೀಡಾಗುತ್ತಿದ್ದಾರೆ. ಇದಲ್ಲದೇ ಹಂದಿ ಸಾಕಣೆ ಮಾಡಲು ದೊಡ್ಡಬಳ್ಳಾಪುರ ನಗರ ಮತ್ತು ಇತರ ಕಡೆಗಳಿಂದ ಕೋಳಿ ಮತ್ತು ನಗರದ ಹೋಟೆಲ್ ತ್ಯಾಜ್ಯ, ಪ್ಲಾಸ್ಟಿಕ್ ತ್ಯಾಜ್ಯ ತಂದು ಸುಡಲಾಗುತ್ತಿದೆ. ಅರ್ಕಾವತಿ ನದಿ ಪಾತ್ರದ ದೊಡ್ಡತುಮಕೂರು ಕೆರೆಗೆ ಶೆಡ್‌ನ ಕೊಳಚೆ ನೀರು ಬಿಡಲಾಗುತ್ತಿದೆ. ಅಕ್ರಮ ಹಂದಿ ಸಾಕಣೆ ಶೆಡ್ ಸ್ಥಳಾಂತರ ಹಾಗೂ ಕೆರೆ ಅಂಗಳಕ್ಕೆ ಕಲುಷಿತ ನೀರು ಸೇರುತ್ತಿದೆ. ಈ ಕುರಿತು ಈಗಾಗಲೇ ಹೋರಾಟ ನಡೆಯುತ್ತಿದ್ದು, ಗ್ರಾಪಂಗೆ ದೂರು ನೀಡಿದ್ದರೂ ಯಾವುದೇ ಪ್ರಯೋಜನವಿಲ್ಲವಾಗಿದೆ. ಆದ್ದರಿಂದ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಶೆಡ್‌ ಸ್ಥಳಾಂತರ ಮಾಡುವಂತೆ ಮನವಿ ಸಲ್ಲಿಸಲಾಗಿದೆ. ಈ ಬಗ್ಗೆ ಕ್ರಮ ಕೈಗೊಳ್ಳದಿದ್ದರೆ ತೀವ್ರ ಹೋರಾಟ ನಡೆಸಬೇಕಾಗುತ್ತದೆ ಎಂದರು.

Ramesh Babu

Journalist

Recent Posts

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

6 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

7 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

9 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

10 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

12 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

17 hours ago