ಬೋನಿಗೆ ಬಿದ್ದ ಚಿರತೆ: ಜನರನ್ನು ನೋಡಿ ಘರ್ಜನೆ

ಚಿತ್ರದುರ್ಗದ ಕಡ್ಲೆಗುದ್ದು ಗ್ರಾಮದ ಜಮೀನಲ್ಲಿ ಬಳಿ ಅರಣ್ಯ ಇಲಾಖೆ ಬೋನಿಗೆ ಚಿರತೆ ಬಿದ್ದಿದೆ. ಕಳೆದ ಒಂದು ವಾರದಿಂದ ಗ್ರಾಮದ ಬಳಿ ಈ ಚಿರತೆಯ ಉಪಟಳ ಹೆಚ್ಚಾಗಿತ್ತು.

ಚಿರತೆ ಸೆರೆ ಹಿಡಿಯಲು ಅರಣ್ಯ ಇಲಾಖೆಗೆ ಜನರು ಮನವಿ ಮಾಡಿದ್ದರು. ಸಾರ್ವಜನಿಕರ ಮನವಿ ಮೇರೆಗೆ ಚಿರತೆ ಸೆರೆ ಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳು ಬೋನು ಇಟ್ಟಿದ್ದರು.

ಇದೀಗ ಚಿರತೆ ಬೋನಿಗೆ ಬಿದ್ದಿದೆ. ಬೋನಿಗೆ ಬಿದ್ದ ಬಳಿಕ ಚಿರತೆ ಘರ್ಜನೆ ನಡೆಸುತ್ತಿರುವ ದೃಶ್ಯ ಜನರ ಮೊಬೈಲ್ ನಲ್ಲಿ ವೀಡಿಯೋ ಸೆರೆಯಾಗಿದೆ.

ಸೆರೆ ಸಿಕ್ಕ ಚಿರತೆಯನ್ನು ಆಡು ಮಲ್ಲೇಶ್ವರ ಕಿರು ಮೃಗಾಲಯಕ್ಕೆ ಶಿಫ್ಟ್ ಮಾಡಿ ಚಿಕಿತ್ಸೆ ನೀಡಲಾಗಿದೆ.

ಅರಣ್ಯ ಇಲಾಖೆ RFO ವಸಂತ್ ಕುಮಾರ್ ನೇತೃತ್ವದಲ್ಲಿ ಚಿರತೆ ಕಾರ್ಯಾಚರಣೆ ನಡೆಸಿ ಚಿಕಿತ್ಸೆ ನೀಡಲಾಗಿದೆ.

Leave a Reply

Your email address will not be published. Required fields are marked *

error: Content is protected !!