ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೇಮುದ್ದೇನಹಳ್ಳಿ-ಕಲ್ಲುಕೋಟೆ ಅರಣ್ಯ ಪ್ರದೇಶದಲ್ಲಿ ಕಳೆದ ಹಲವು ದಿನಗಳಿಂದ ಜನರ ನಿದ್ದೆಗೆಡಿಸಿದ್ದ ಚಿರತೆ ಕಳೆದ ರಾತ್ರಿ ಬೋನಿಗೆ ಬಿದ್ದಿದೆ, ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ.
ತೂಬಗೆರೆ ಹೋಬಳಿ ವ್ಯಾಪ್ತಿಯ ಹಿರೇಮುದ್ದೇನಹಳ್ಳಿ, ಕೆಳಗಿನಜೂಗಾನಹಳ್ಳಿ ಗ್ರಾಮದಲ್ಲಿ ಒಂದೇ ತಿಂಗಳಲ್ಲಿ ಎರಡು ಹಸುಗಳನ್ನು ಬಲಿ ಪಡೆದಿದ್ದ ಚಿರತೆ, ಈ ಹಿನ್ನೆಲೆ ಭಾರೀ ಅನಾಹುತ ನಡೆಯುವುದಕ್ಕಿಂತ ಮೊದಲು ಚಿರತೆಯನ್ನ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ಮನವಿ ಮಾಡಿದ್ದರು.
ಹಿರೇಮುದ್ದೇನಹಳ್ಳಿ ಗ್ರಾಮದ ಸುತ್ತಮುತ್ತ ಹಗಲು ವೇಳೆಯಲ್ಲಿಯೇ ಚಿರತೆ ಕಾಣಿಸಿಕೊಳ್ಳುತ್ತಿರುವುದರಿಂದ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿತ್ತು.
ಎರಡು ಮೂರು ದಿನಗಳ ಹಿಂದೆ ಜಾನುವಾರುಗಳ ಮೇಲೆ ದಾಳಿ ಮಾಡಿ ಹಸುವೊಂದನ್ನು ಬಲಿಪಡೆದಾಗಿನಿಂದ ಅರಣ್ಯದಂಚಿನ ಗ್ರಾಮಸ್ಥರು ಭಯಭೀತರಾಗಿದ್ದರು.
ಈಗ ಚಿರತೆ ಸೆರೆಯಿಂದ ಕೊಂಚ ನಿರಾಳವಾಗಿದೆ. ಆದರೂ ನಿತ್ಯ ವನ್ಯಜೀವಿ ಸಂಘರ್ಷದಿಂದ ಬೇಸರವಾಗಿದೆ. ಚಿರತೆ ಹಾವಳಿಯಿಂದ ಶಾಶ್ವತ ಪರಿಹಾರಕ್ಕೆ ಅರಣ್ಯ ಇಲಾಖೆ ಮುಂದಾಗಬೇಕು ಹಾಗೂ ಚಿರತೆ ದಾಳಿಯಿಂದ ಜಾನುವಾರುಗಳನ್ನು ಕಳೆದುಕೊಂಡು ರೈತರಿಗೆ ಸೂಕ್ತ ಪರಿಹಾರ ತ್ವರಿತ ಗತಿಯಲ್ಲಿ ಒದಗಿಸಿಕೊಡಬೇಕು ಎಂದು ತೂಬಗೆರೆ ಗ್ರಾಮಸ್ಥ ಉದಯ ಆರಾಧ್ಯ ಆಗ್ರಹಿಸಿದ್ದಾರೆ.
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…