Categories: ಕೋಲಾರ

ಬೋವಿ ಸಮುದಾಯ ಭವನಕ್ಕೆ ಸರಕಾರ, ವೈಯಕ್ತಿಕವಾಗಿ ಅನುದಾನ ನೀಡುವೆ: ಕೊತ್ತೂರು ಮಂಜುನಾಥ್

ಕೋಲಾರ: ಬೋವಿ ಸಮುದಾಯದ ಅಭಿವೃದ್ಧಿಗಾಗಿ ನಿರ್ಮಾಣವಾಗುತ್ತಿರುವ ಸಮುದಾಯ ಭವನಕ್ಕೆ ಸರಕಾರದಿಂದ ಹಾಗೂ ವೈಯಕ್ತಿಕವಾಗಿ ಅನುದಾನ ನೀಡಲು ಸಿದ್ದರಿದ್ದು ಸಮುದಾಯಕ್ಕೆ ಅನುಕೂಲವಾಗುವಂತೆ ಭವನವನ್ನು ನಿರ್ಮಾಣ ಮಾಡಿ ನಾಲ್ಕು ಜನ ನೆನಪಿಸಿಕೊಳ್ಳುವಂತಾಗಬೇಕು ಎಂದು ಶಾಸಕ ಕೊತ್ತೂರು ಜಿ.ಮಂಜುನಾಥ್ ತಿಳಿಸಿದರು

ನಗರ ಹೊರವಲಯದ ಟಮಕ ಬಡಾವಣೆ ಕುಡಾ ಲೇಔಟ್ ನಲ್ಲಿ ಶನಿವಾರ ಸುಮಾರು 4 ಕೋಟಿ ವೆಚ್ಚದ ಭೋವಿ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿ ಮಾತನಾಡಿದ ಅವರು ಯಾವುದೇ ಸಮಾಜವಾಗಲಿ, ಜಾತಿಯಾಗಲಿ ನಾಲ್ಕು ಜನಕ್ಕೆ ಒಳ್ಳೆಯದು ಮಾಡುವ ಕೆಲಸಕ್ಕೆ ನನ್ನ ಬೆಂಬಲ ಇದ್ದೇ ಇರುತ್ತದೆ ಜನಪ್ರತಿನಿಧಿಗಳಿಗೆ ರಾಜಕೀಯ ಮುಖ್ಯವಲ್ಲ ಎಲ್ಲಾ ಜಾತಿ ಜನಾಂಗಗಳಿಗೆ ಒಳಿತು ಮಾಡುವ ಜವಾಬ್ದಾರಿ ನಮ್ಮದು ಆಗಿರಬೇಕು ಅಷ್ಟೇ ಎಂದು ತಿಳಿಸಿದರು.

ಸಮುದಾಯದ ಜಾಗವನ್ನು ಗುರುತಿಸಿಕೊಳ್ಳಲು ಅನೇಕರ ಶ್ರಮವಿದೆ ಹಿಂದೆ ಗುದ್ದಲಿ ಪೂಜೆಯೂ ಮಾಡಿದ್ದಾರೆ ಆದರೆ ಯಾರೇ ಪೂಜೆ ಮಾಡಲಿ, ಬಿಡಲಿ ಅದು ಉಪಯೋಗಕ್ಕೆ ಬರುವಂತೆ ಕೆಲಸ ಮಾಡಿದಾಗ ಮಾತ್ರವೇ ಜನ ನೆನಪಿಸಿಕೊಳ್ಳುತ್ತಾರೆ ಮುಂದಿನ ಒಂದು ವರ್ಷದಲ್ಲಿ ಕಟ್ಟಡವನ್ನು ಪೂರ್ಣಗೊಳಿಸಿ ಬೋವಿ ಸಮುದಾಯದ ಚಟುವಟಿಕೆಗಳಿಗೆ ಅನುವು ಮಾಡಿಕೊಡುವಂತೆ ಗುತ್ತಿಗೆದಾರನಿಗೆ ತಿಳಿಸಿ ಸಮುದಾಯದ ಮುಖಂಡರು ಒಗ್ಗಟ್ಟಿನಿಂದ ಆಗಿಂದಾಗ್ಗೆ ಬಂದು ಕಾಮಗಾರಿಯನ್ನು ಪರಿಶೀಲನೆ ಮಾಡಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್  ಕುಮಾರ್ ಮಾತನಾಡಿ ರಾಜ್ಯ ಸರಕಾರವು ಪ್ರತಿಯೊಂದು ಸಮುದಾಯಗಳು ತಮ್ಮ  ಚಟುವಟಿಕೆಗಳನ್ನು ನಡೆಸಲು ಸಮುದಾಯ ಭವನಗಳ ನಿರ್ಮಾಣ ಮಾಡಲು ಉದ್ದೇಶಿಸಿದೆ ಈ ಸಮುದಾಯ ಭವನ ನಿರ್ಮಾಣಕ್ಕೆ ಹಣದ ಕೊರತೆ ಆದರೆ ಎಂಎಲ್ಸಿ ಹಾಗೂ ಮತ್ತು ಶಾಸಕರ ಅನುದಾನದಲ್ಲಿ ಅಗತ್ಯ ಹಣ ಬಿಡುಗಡೆ ಮಾಡಿಕೊಡುವ ಆಶ್ವಾಸನೆ ನೀಡಿದರು ಜಾಗದ ಕೊರತೆ ಹಾಗೂ ಭೂಮಿ ಕಡಿಮೆ ಕೊಟ್ಟಿರುವ ಬಗ್ಗೆ ವಿಚಾರ ಮಾಡಿ ಲಭ್ಯತೆ ಇದ್ದರೆ ಮತ್ತಷ್ಟು ಜಾಗವನ್ನು ಕೊಡಿಸಿ ಕೊಡುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷೆ  ಹಾಗೂ ಭೋವಿ ಜನಾಂಗದ ಜಿಲ್ಲಾ ಅಧ್ಯಕ್ಷೆ ಮಂಗಮ್ಮ ಮುನಿಸ್ವಾಮಿ ಮಾತನಾಡಿ ಸಮುದಾಯದ ಅಭಿವೃದ್ಧಿಗಾಗಿ ಸರಕಾರವು ಒಂದು ಕೋಟಿ ಜಾಗಕ್ಕೆ ನಾಲ್ಕು ಕೋಟಿ ಸಮುದಾಯ ಭವನಕ್ಕೆ ನೀಡಿದ್ದಾರೆ ಮುಂದೆ ಸಮುದಾಯದ ಮಕ್ಕಳ ಶೈಕ್ಷಣಿಕವಾಗಿ ಬೆಳೆಯಲು ಶಾಲೆ ಹಾಗೂ ಹಾಸ್ಟೆಲ್ ಅವಶ್ಯಕತೆ ಇದ್ದು ಕನಿಷ್ಠ 20 ಕುಂಟೆ ಜಾಗವನ್ನು ಸರಕಾರ ಮಂಜೂರು ಮಾಡುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಭೋವಿ ಜನಾಂಗದ ಜಿಲ್ಲಾ ಉಪಾಧ್ಯಕ್ಷ ಸಿ.ವಿ ಗೋಪಾಲ್, ನಗರಸಭೆ ಸದಸ್ಯರಾದ ಅಂಬರೀಷ್, ನಾಗರಾಜ್, ಕೋಚಿಮುಲ್ ಮಾಜಿ ನಿರ್ದೇಶಕ ಛತ್ರಕೋಡಿಹಳ್ಳಿ ರಾಮಕೃಷ್ಣೇಗೌಡ, ವಕ್ಕಲೇರಿ ಗ್ರಾಪಂ ಮಾಜಿ ಅಧ್ಯಕ್ಷ ವಕ್ಕಲೇರಿ ರಾಜಪ್ಪ, ಮೈಲಾಂಡಹಳ್ಳಿ ಮುರಳಿ, ಬೋವಿ ಸಮುದಾಯದ ಮುಖಂಡರಾದ ವರದೇನಹಳ್ಳಿ ವೆಂಕಟೇಶ್, ಹರಿಪ್ರಸಾದ್, ಮಾಲೂರು ಎಸ್.ವಿ.ಲೋಕೇಶ್, ಎಲ್.ಜಿ ಮುನಿರಾಜು, ಪಾಪಣ್ಣ, ಕೂಟೇರಿ ಚರಣ್, ಗುತ್ತಿಗೆದಾರ ರಾಜಣ್ಣ ಮುಂತಾದವರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮಹಾವೀರ ಜಯಂತಿ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…

9 hours ago

ನಾನು ಯಾರ ಜಮೀನು ಕಬಳಿಕೆ‌ ಮಾಡಿಲ್ಲ- ಕಾನೂನಾತ್ಮಕವಾಗಿ ಜಮೀನು ಖರೀದಿ ಮಾಡಿದ್ದೇನೆ- ನನ್ನ ಏಳಿಗೆ ಸಹಿಸದವರಿಂದ ನನ್ನ ಮೇಲೆ ಹಲ್ಲೆ ನಡೆದಿದೆ- ಕಾನೂನು ಹೋರಾಟ ಮಾಡಿ ಗೆಲ್ಲುವೆ- ವಕೀಲ ಪ್ರತಾಪ್

ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…

10 hours ago

KIADB ಭೂಸ್ವಾಧೀನ ವಿರೋಧಿಸಿ ತಾಲೂಕು ಕಚೇರಿಗೆ ಟ್ರ್ಯಾಕ್ಟರ್ ರ್ಯಾಲಿ

ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ  ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…

18 hours ago

ಹುಟ್ಟಿಸುವವನೂ ಅವನೇ…. ಸಾಯಿಸುವವನೂ ಅವನೇ…

ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…

24 hours ago

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ-ಎನ್.ಶೋಭಾ

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…

1 day ago

ಮನೆ ಹೊಸ್ತಿಲಿನಲ್ಲಿ ಪೂಜೆಗಿಟ್ಟಿದ್ದ ಒಣಗಿದ ದಾಸವಾಳ ಹೂ ನುಂಗಿ ಆರುವರೆ ತಿಂಗಳ ಮಗು ದಾರುಣ ಸಾವು

ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…

1 day ago