ಒಡಿಶಾ ಹಾಗೂ ಜಾರ್ಖಂಡ್‌ನಲ್ಲಿರುವ ಬೌದ್ ಡಿಸ್ಟಿಲರೀಸ್ ಪ್ರೈವೇಟ್ ಲಿಮಿಟೆಡ್ ಕಂಪನಿ ಮೇಲೆ ಆದಾಯ ತೆರಿಗೆ ಇಲಾಖೆ ತಂಡವು ಇಂದು ದಾಳಿ ನಡೆಸಲಾಗಿದೆ. ದಾಳಿಯಲ್ಲಿ ಕಂಪನಿಗೆ ಸಂಬಂಧಿಸಿದ ಆವರಣದಲ್ಲಿ ಅಪಾರ ಪ್ರಮಾಣದ ಗರಿ ಗರಿ ನೋಟುಗಳ ಬಂಡಲ್‌ಗಳನ್ನು ಪತ್ತೆ ಹಚ್ಚಿ ಹೆಚ್ಚಿನ ತನಿಖೆಗೆ ವಶಪಡಿಸಿಕೊಳ್ಳಲಾಗಿದೆ.
ಆದಾಯ ತೆರಿಗೆ ಇಲಾಖೆಯು ಒಡಿಶಾದ ಬೋಲಂಗಿರ್, ಸಂಬಲ್‌ಪುರ ಮತ್ತು ಜಾರ್ಖಂಡ್‌ನ ರಾಂಚಿ, ಲೋಹರ್‌ಡಗಾದಲ್ಲಿ ದಾಳಿ ನಡೆಸಿದ್ದು ಇನ್ನೂ ಮುಂದುವರಿದಿದೆ. ಬುಧವಾರವೇ ದಾಳಿಯಲ್ಲಿ 50 ಕೋಟಿ ರೂಪಾಯಿ ಮೌಲ್ಯದ ನೋಟುಗಳ ಎಣಿಕೆ ಪೂರ್ಣಗೊಂಡಿದೆ. ಆದರೆ ಹೆಚ್ಚಿನ ಸಂಖ್ಯೆಯ ನೋಟುಗಳಿಂದಾಗಿ ಎಣಿಕೆ ಯಂತ್ರಗಳು ಕೈಕೊಟ್ಟಿವೆ ಎಂದು ಮೂಲಗಳಿಂದ ತಿಳಿದುಬಂದಿದೆ.